Home ಅಪರಾಧ ಉರುಳಿದ ಬಸ್

ಉರುಳಿದ ಬಸ್

0

ಕೂಡ್ಲಿಗಿ: ತಾಲೂಕಿನ ಎಂ.ಬಿ. ಅಯ್ಯನಹಳ್ಳಿ ಬಳಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಮಂಗಳವಾರ ನಸುಕಿನ ಜಾವ ಖಾಸಗಿ ಬಸ್ ಉರುಳಿ ೧೦ಕ್ಕೂ ಹೆಚ್ಚು ಪ್ರಯಾಣಿಕರು ಗಾಯಗೊಂಡಿದ್ದಾರೆ.
ಬೆಂಗಳೂರಿನಿಂದ ಕಲುಬುರಗಿಗೆ ತೆರಳುತ್ತಿದ್ದ ಶ್ರೀ ಸಾಯಿ ಸ್ಲೀಪರ್ ಬಸ್ ಚಾಲಕನ ನಿಯಂತ್ರಣ ತಪ್ಪಿ ಉರುಳಿ ಈ ದುರಂತ ಸಂಭವಿಸಿದೆ. ಚಾಲಕನ ಸ್ಥಿತಿ ಗಂಭೀರವಾಗಿದೆ. ಗಾಯಾಳುಗಳನ್ನು ಕೂಡ್ಲಿಗಿ ಸಾರ್ವಜನಿಕ ಆಸ್ಪತ್ರೆಗೆ ದಾಖಲಿಸಲಾಗಿದೆ. ಸ್ಥಳಕ್ಕೆ ಕಾನಹೊಸಹಳ್ಳಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Exit mobile version