ಚಿಕ್ಕೋಡಿ: ಆಕ್ಸಿಸ್ ಬ್ಯಾಂಕ್ ಎಟಿಎಂನಲ್ಲಿ ಗ್ಯಾಸ್ ಕಟರ್ ಬಳಸಿದ ಕಳ್ಳರು ಲಕ್ಷಾಂತರ ರೂ. ಹಣ ದೋಚಿಕೊಂಡು ಹೋಗಿರುವ ಘಟನೆ ಚಿಕ್ಕೋಡಿ ತಾಲೂಕಿನ ಅಂಕಲಿ ಗ್ರಾಮದಲ್ಲಿ ನಡೆದಿದೆ.
ಅಂಕಲಿ ಗ್ರಾಮದಲ್ಲಿ ಎಟಿಎಂನಲ್ಲಿ ಗ್ಯಾಸ್ ಕಟರ್ ಬಳಸಿ ಲಕ್ಷಾಂತರ ರೂ. ಹಣ ಕಳ್ಳತನ ಮಾಡಲಾಗಿದೆ. ಎರಡು ದಿನಗಳ ಹಿಂದೆ ಬ್ಯಾಂಕ್ ಸಿಬ್ಬಂದಿ ೧೭ಲಕ್ಷ ರೂ. ಎಟಿಎಂಗೆ ತುಂಬಿದ್ದರು. ಸ್ಥಳಕ್ಕೆ ಪೊಲೀಸರು ಹಾಗೂ ಎಫ್‌ಎಸ್‌ಎಲ್ ಸಿಬ್ಬಂದಿ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಈ ಕಳ್ಳತನ ಜನರಲ್ಲಿ ಆತಂಕಕ್ಕೆ ಕಾರಣವಾಗಿದೆ.
