ಕಂಟೇನರ್‌ಗೆ ಕಾರು ಡಿಕ್ಕಿ ಇಬ್ಬರ ಸಾವು

0
11
ದಂಪತಿ ಸಾವು

ಕಲಬುರಗಿ: ಜಿಲ್ಲೆಯ ಜೇವರ್ಗಿ ತಾಲೂಕಿನ ನೇಲೋಗಿ ಕ್ರಾಸ್ ಬಳಿ ನಿಂತಿದ್ದ ಕಂಟೇನರ್‌ಗೆ ಮಾರುತಿ ಸ್ವೀಫ್ಟ್ ಡಿಸೈರ್ ಕಾರು ಡಿಕ್ಕಿ ಹೊಡೆದ ಪರಿಣಾಮ ವಿಜಯಪುರ ಜಿಲ್ಲೆ ಸಿಂದಗಿ ಸಿಪಿಐ ಹಾಗೂ ಅವರ ಪತ್ನಿ ಸ್ಥಳದಲ್ಲೇ ದುರ್ಮರಣಕ್ಕೀಡಾದ ಘಟನೆ ಇಂದು ನಡೆದಿದೆ.

ರವಿ ಉಕ್ಕುಂದ (43) ಹಾಗೂ ಪತ್ನಿ ಮಧು(40) ಮೃತ ದುರ್ದೈವಿಗಳು. ಸಿಂದಗಿಯಿಂದ ಕಲಬುರಗಿ ನಗರಕ್ಕೆ ಆಗಮಿಸುತ್ತಿದ್ದ ಸಿಪಿಐ ದಂಪತಿಯ ಕಾರು ಕಂಟೇನರ್‌ಗೆ ಡಿಕ್ಕಿ ಹೊಡೆದ ಪರಿಣಾಮ ಕಾರಿನ ಮುಂಭಾಗ ನುಜ್ಜುಗುಜ್ಜಾಗಿ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಅಪಘಾತ ಸ್ಥಳಕ್ಕೆ ಹಿರಿಯ ಪೊಲೀಸ್ ಅಧಿಕಾರಿ ಭೇಟಿ ನೀಡಿ ಪರಿಶೀಲಿಸಿದ್ದು, ನೇಲೋಗಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Previous articleಬೆಂಕಿ ಹಚ್ಚಿ ಇಬ್ಬರು ಹೆಣ್ಣು ಮಕ್ಕಳ ಕೊಲೆಗೆ ತಾಯಿ ಯತ್ನ
Next articleಅನುಚಿತ ವರ್ತನೆ – ಶಿಕ್ಷಕನಿಗೆ ಧರ್ಮದೇಟು