ಕಾಂಗ್ರೇಸ್‌ನ ಗಾಯತ್ರಿ ಶಾಂತೇಗೌಡ ನಿವಾಸದ ಮೇಲೆ ಐಟಿ ದಾಳಿ

0
13
ಗಾಯತ್ರಿ

ಚಿಕ್ಕಮಗಳೂರು ವಿಧಾನ ಪರಿಷತ್ ಮಾಜಿ ಸದಸ್ಯೆ ಕಾಂಗ್ರೇಸ್ ನಾಯಕಿ ಗಾಯತ್ರಿ ಶಾಂತೇಗೌಡ ಅವರ ನಿವಾಸದ ಮೇಲೆ ಆದಾಯ ತೆರಿಗೆ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಇಂದು ನಸುಕಿನಲ್ಲಿ 10 ಕಾರುಗಳಲ್ಲಿ ಆಗಮಿಸಿರುವ ಐಟಿ ಅಧಿಕಾರಿಗಳ ತಂಡ ಚಿಕ್ಕಮಗಳೂರು ನಗರದ ನಿವಾಸ, ಬೇಲೂರಿನ ಅವರ ಅಳಿಯ ಸಂತೋಷ್ ಅವರ ನಿವಾಸ ಸೇರಿದಂತೆ 13 ಕಡೆ ಏಕಕಾಲದಲ್ಲಿ ದಾಳಿ ನಡೆಸಿ ದಾಖಲೆಗಳನ್ನು ಪರಿಶೀಲನೆ ನಡೆಸುತ್ತಿದೆ.
ಕಾರಿನ ಮುಂಭಾಗ ಮದುವೆಯ ಬೋರ್ಡ್ ಹಾಕಿಕೊಂಡು ಬಂದಿರುವ ಅಧಿಕಾರಿಗಳು. ಅನುಮಾನ ಬಾರದಿರಲಿ ಎಂಬ ಕಾರಣಕ್ಕೆ ಅಭಿನವ್ ವೆಡ್ಸ್ ದೀಪಿಕಾ ಎಂದು ಬೋರ್ಡ್ ಹಾಕಿಕೊಂಡಿರುವ ಅಧಿಕಾರಿಗಳು̧ ಗಾಯತ್ರಿ ಈ ಹಿಂದೆ ಒಂದು ಅವಧಿಗೆ ವಿಧಾನ ಪರಿಷತ್ ಸದಸ್ಯೆಯಾಗಿದ್ದರು. ಕಳೆದ ವಿಧಾನ ಪರಿಷತ್ ಚುನಾವಣೆಯಲ್ಲಿ ಬಿ.ಜೆ.ಪಿ.ಯ ಎಂ.ಕೆ. ಪ್ರಾಣೇಶ್ ಅವರ ವಿರುದ್ಧ ಅಲ್ಪಮತಗಳಿಂದ ಪರಾಭವಗೊಂಡಿದ್ದರು.

Previous articleಮಾಜಿ ಮೇಯರ್ ಡಿ.ಕೆ. ಚವ್ಹಾಣ 75 ನೇ ವಯಸ್ಸಲ್ಲಿ 2ನೇ ಮದುವೆ
Next articleಬಿಜೆಪಿ ಸರ್ಕಾರದಿಂದ ಮತದಾರರ ಮಾಹಿತಿ ಕಳ್ಳತನ: ಕಾಂಗ್ರೆಸ್ ಗಂಭೀರ ಆರೋಪ