Home ಅಪರಾಧ ಗಾಂಜಾ ಸೇವನೆ: ಐವರು ವಿದ್ಯಾರ್ಥಿಗಳ ವಿರುದ್ದ ಪ್ರಕರಣ ದಾಖಲು

ಗಾಂಜಾ ಸೇವನೆ: ಐವರು ವಿದ್ಯಾರ್ಥಿಗಳ ವಿರುದ್ದ ಪ್ರಕರಣ ದಾಖಲು

0

ಮಣಿಪಾಲ: ಉಡುಪಿ ತಾಲೂಕು ಶಿವಳ್ಳಿ ಗ್ರಾಮದ ಮಾಂಡವಿ ಎಮರಾಲ್ಡ್ಅಪಾರ್ಟ್ಮೆಂಟ್ಬಳಿ ಸಾರ್ವಜನಿಕ ಸ್ಥಳದಲ್ಲಿ ಗಾಂಜಾ ಸೇವನೆ ಆರೋಪದ ಮೇಲೆ ಐವರು ವಿದ್ಯಾರ್ಥಿಗಳನ್ನು ವಶಕ್ಕೆ ಪಡೆದು ಎನ್ ಡಿ ಪಿ ಎಸ್ ಕಾಯ್ದೆಯಡಿ ಪ್ರಕರಣ ದಾಖಲಿಸಲಾಗಿದೆ. ವಶಕ್ಕೆ ಪಡೆದ ವಿದ್ಯಾರ್ಥಿಗಳನ್ನು ನಿಖಿಲ್ ಎಮ್ (22), ತನ್ವೀರ್ ರೆಡ್ಡಿ (25), ಶರಣ್ ಶೆಟ್ಟಿ (22), ರಾಹುಲ್ ಸೀಮಾ (21), ತುಶಾರ್ ಜಿ (21) ಎಂದು ಗುರುತಿಸಲಾಗಿದೆ. ಮಣಿಪಾಲ ಪೊಲೀಸ್ ಠಾಣಾ ಪೊಲೀಸ್ ಉಪನಿರೀಕ್ಷಕರಾದ ನವೀನ್ ನಾಯ್ಕ ಇವರು ರೌಂಡ್ಸ್ ಕರ್ತವ್ಯದಲ್ಲಿರುವಾಗ ವಿದ್ಯಾರ್ಥಿಗಳು ಗಾಂಜಾವನ್ನು ಸೇವಿಸಿರುವ ಸಂದೇಹದ ಮೇಲೆ ವಶಕ್ಕೆ ಪಡೆದು ವೈದ್ಯಕೀಯ ಪರೀಕ್ಷೆಗಾಗಿ ಮಣಿಪಾಲ ಕಸ್ತೂರ್ಬಾ ಆಸ್ಪತ್ರೆಯ ಪೊರೆನ್ಸಿಕ್ ವಿಭಾಗದ ವೈದ್ಯರ ಮುಂದೆ ಹಾಜರುಪಡಿಸಿದ್ದು, ವಿದ್ಯಾರ್ಥಿಗಳು ಗಾಂಜಾ ಸೇವಿಸಿರುವ ಧೃಡಪಟ್ಟಿದೆ. ಈ ಬಗ್ಗೆ ಮಣಿಪಾಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ

Exit mobile version