ಬೆಂಗಳೂರು: ಪುನೀತ್ ಕೆರೆಹಳ್ಳಿಯನ್ನು ಸಿಸಿಬಿ ಪೊಲೀಸರು ಗೂಂಡಾ ಕಾಯ್ದೆ ಅಡಿ ಬಂಧಿಸಿದ್ದಾರೆ. ಪುನೀತ್ ವಿರುದ್ಧ ವಿವಿಧ ಪೊಲೀಸ್ ಠಾಣೆಯಲ್ಲಿ ಕೊಲೆ, ಗಲಭೆ ಸೇರಿದಂತೆ 10ಕ್ಕೂ ಹೆಚ್ಚು ಪ್ರಕರಣಗಳು ದಾಖಲಾಗಿರುವ ಹಿನ್ನೆಲೆಯಲ್ಲಿ ಗೂಂಡಾ ಕಾಯ್ದೆ ಅಡಿ ಆತನನ್ನು ಬಂಧಿಸಲಾಗಿದೆ. ಸಮಾಜ ವಿರೋಧಿ ಚಟುವಟಿಕೆಗಳನ್ನು ತಡೆಯುವ ಸಲುವಾಗಿ ಕರ್ನಾಟಕ ಗೂಂಡಾ ಕಾಯಿದೆ ಅಡಿ ಪ್ರಕರಣ ದಾಖಲಿಸಿಕೊಂಡಿರುವ ಸಿಸಿಬಿ ಪೊಲೀಸರು ಪುನೀತ್ ಕೆರೆಹಳ್ಳಿಯನ್ನು ಬಂಧಿಸಿದ್ದಾರೆ. ಸದ್ಯ ಆತನನ್ನು ಪರಪ್ಪನ ಆಗ್ರಹಾರ ಕಾರಗೃಹಕ್ಕೆ ಕಳಿಸಲಾಗಿದೆ