ಕಲಘಟಗಿ: ಚಿನ್ನದ ಆಸೆಗಾಗಿ ವೃದ್ಧೆಯೊಬ್ಬಳನ್ನ ಕತ್ತು ಕೊಯ್ದು ಭೀಕರವಾಗಿ ಕೊಲೆ ಮಾಡಿದ ಘಟನೆ ತಾಲೂಕಿನ ಆಲದಕಟ್ಟಿ ಗ್ರಾಮದ ಹೊಲವೊಂದರಲ್ಲಿ ನಡೆದಿದೆ.
ತಾಲೂಕಿನ ನೆಲ್ಲಿಹರವಿ ಗ್ರಾಮದ ತಿಪ್ಪವ್ವ ಕಲ್ಲಪ್ಪ ತಂಬೂರ(82) ಎಂಬುವರೆ ಕೊಲೆಗೀಡಾದ ದುರ್ದೈವಿಯಾಗಿದ್ದು, ಶುಕ್ರವಾರ ಮಧ್ಯಾಹ್ನದ ಸಮಯದಲ್ಲಿ ವೃದ್ಧೆಯನ್ನು ಆಲದಕಟ್ಟಿ ಗ್ರಾಮದ ದ್ಯಾಮಣ್ಣ ಇಂದೂರು ಎಂಬುವರ ಕಬ್ಬಿನ ಹೊಲಕೆ ಕರೆದೊಯ್ದು, ಕುತ್ತಿಗೆ ಕೊಯ್ದು ಭೀಕರವಾಗಿ ಕೊಲೆ ಮಾಡಿ, ವೃದ್ಧೆಯ ಕೊರಳಲಿದ್ದ ಚಿನ್ನಾಭರಣ ದೋಚಿಕೊಂಡು ಕೊಲೆಗಾರರರು ಪರಾರಿಯಾಗಿರಬಹುದು ಎಂದು ಶಂಕಿಸಲಾಗಿದೆ.
ಈ ಕುರಿತು ಕಲಘಟಗಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಘಟನಾ ಸ್ಥಳಕ್ಕೆ ಕಲಘಟಗಿ ಸಿಪಿಐ ಶ್ರೀಶೈಲ ಕೌಜಲಗಿ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಘಟನಾ ಸ್ಥಳಕ್ಕೆ ಈಗಾಗಲೇ ಶ್ವಾನದಳ ಆಗಮಿಸಿ ತನಿಖೆ ಕೈಗೊಂಡಿದ್ದು, ಕೊಲೆಗಾರರ ಪತ್ತೆಗೆ ಪೊಲೀಸರು ಬಲೆ ಬೀಸಿದ್ದಾರೆ.