ಅಥಣಿ: ಅಥಣಿ ತಾಲೂಕಿನ ಅಡಹಳ್ಳಿ ಗ್ರಾಮದಲ್ಲಿ ಯುವಕನ ತಲೆಗೆ ಕಲ್ಲಿನಿಂದ ಜಜ್ಜಿ ಬರ್ಬರವಾಗಿ ಹತ್ಯೆಗೈದ ಘಟನೆ ರವಿವಾರ ನಡೆದಿದೆ.
ಮಾಳು ಯಮಗಾರ(35) ಹತ್ಯೆಯಾದ ಯುವಕ. ರವಿವಾರ ಮುಂಜಾನೆ ಘಟನೆ ನಡೆದಿದ್ದು, ಗಂಭೀರ ಗಾಯಗೊಂಡಿದ್ದ ಮಾಳುನನ್ನು ಸ್ಥಳೀಯರು ಅಥಣಿಯ ಖಾಸಗಿ ಆಸ್ಪತ್ರೆಗೆ ಸಾಗಿಸಿದರಾದರೂ ಚಿಕಿತ್ಸೆ ಫಲಕಾರಿಯಾಗದೆ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾನೆ. ಈ ಕುರಿತು ಅಥಣಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.