ದುಷ್ಕರ್ಮಿಗಳಿಂದ ಎಟಿಎಂ ಲೂಟಿ

0
10

ಬಸವಕಲ್ಯಾಣ(ಬೀದರ್): ದುಷ್ಕರ್ಮಿಗಳು ಗುರುವಾರ ಬೆಳಗಿನ ಜಾವ 4ಗಂಟೆ ಸುಮಾರಿಗೆ ಇಲ್ಲಿನ ಕರ್ನಾಟಕ ಬ್ಯಾಂಕ್ ಎಟಿಎಮ್ ಕಿಯಾಸ್ಕ್‌ನ್ನು ಗ್ಯಾಸ್ ಕಟರ್‌ನಿಂದ ಒಡೆದು ಅದರಲ್ಲಿದ್ದ 6.66 ಲಕ್ಷ ರೂ.ಗಳನ್ನು ಲೂಟಿ ಮಾಡಿ ಪರಾರಿಯಾಗಿದ್ದಾರೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.
ಆರೋಪಿಗಳನ್ನು ದಸ್ತಗಿರಿ ಮಾಡಲು ಪೊಲೀಸರ ವಿಶೇಷ ತಂಡ ರಚಿಸಲಾಗಿದ್ದು, ಪರಾರಿಯಾಗಿರುವ ಆರೋಪಿಗಳನ್ನು ಶೀಘ್ರದಲ್ಲಿಯೇ ದಸ್ತಗಿರಿ ಮಾಡಿ ಪ್ರಕರಣ ಶೀಘ್ರದಲ್ಲಿ ಇತ್ಯರ್ಥ ಪಡಿಸಲಾಗುವುದು ಎಂದು ಬೀದರ್ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಚನ್ನಬಸವಣ್ಣ ಲಂಗೋಟಿ ತಿಳಿಸಿದ್ದಾರೆ.

Previous articleತಡಗವಾಡಿಯಲ್ಲಿ ಗ್ರಾಮೀಣ ಕೃಷಿ ಕಾರ್ಯಾಗಾರ
Next articleಕಾಂಗ್ರೆಸ್ ಅಧಿಕಾರಕ್ಕೇರಿದಾಗ ಇಂಥ ರಾಕ್ಷಸರ ಸಮರ್ಥನೆ ಹೊಸದಲ್ಲ