ದೇಗುಲದ ಬೀಗ ಮುರಿದು ಆಂಜನೇಯ ಮೂರ್ತಿ ವಿರೂಪಗೊಳಿಸಿದ ದುಷ್ಕರ್ಮಿಗಳು

0
19

ವಿಜಯನಗರ: ಆಂಜನೇಯ ಮೂರ್ತಿಯನ್ನು ವಿರೂಪಗೊಳಿಸಿದ ಘಟನೆ ಜಿಲ್ಲೆಯ ಹೊಸಪೇಟೆ ತಾಲೂಕಿನ ಹೊಸ ಹಂಪಿ ಗ್ರಾಮದಲ್ಲಿ ಘಟನೆ ನಡೆದಿದೆ. ದುಷ್ಕರ್ಮಿಗಳ ಕೃತ್ಯಕ್ಕೆ ಆಂಜನೇಯ ಮೂರ್ತಿಯ ಮಖ ತುಂಡಾಗಿ ವಿರೂಪವಾಗಿದೆ. ಗುರುವಾರ ತಡರಾತ್ರಿ ಈ ಘಟನೆ ನಡೆದಿದೆ ಎನ್ನಲಾಗಿದೆ, ತಡರಾತ್ರಿ ಕಾರ್ಯಸಿದ್ಧಿ ಶ್ರೀ ಆಂಜನೇಯ ಸ್ವಾಮಿ ದೇಗುಲದ ಬೀಗ ಮುರಿದು, ಒಳ ನುಗ್ಗಿರುವ ದುಷ್ಟರು ಮೂರ್ತಿಯನ್ನು ಒಡೆದು ಹಾಕಿದ್ದಾರೆ. ಮುಂಜಾನೆ ಅರ್ಚಕರು ದೇವಸ್ಥಾನಕ್ಕೆ ಬಂದಾಗ ಪ್ರಕರಣ ಬೆಳಕಿಗೆ ಬಂದಿದೆ. ವಿಷಯ ತಿಳಿಯುತ್ತಿದ್ದಂತೆ ಘಟನಾ ಸ್ಥಳಕ್ಕೆ ಪೊಲೀಸರು ಹಾಗೂ ಬೆರಳಚ್ಚು ವಿಭಾಗ ತಜ್ಞರು, ಶ್ವಾನದಳದಿಂದ ಪರಿಶೀಲನೆ ನಡೆಸಲಾಗುತ್ತಿದೆ.
ಹೊಸಪೇಟೆ ಡಿವೈಎಸ್‌ಪಿ ಶರಣಬಸವೇಶ್ವರ, ಹಂಪಿ ಪ್ರವಾಸಿ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಹಲವು ಆಯಾಮಗಳಲ್ಲಿ ತನಿಖೆ ನಡೆಸುತ್ತಿದ್ದಾರೆ. ಪ್ರಕರಣ ಸಂಬಂಧ ಹಂಪಿ ಪ್ರವಾಸಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ಕಳೆದ ಮೂರು ವರ್ಷದ ಹಿಂದೆ ಕಾರ್ಯಸಿದ್ಧಿ ಶ್ರೀ ಆಂಜನೇಯ ಸ್ವಾಮಿ ಪ್ರತಿಷ್ಠಾಪನೆ ಮಾಡಲಾಗಿತ್ತು.

Previous articleಜೂನ್ 16ರಿಂದ ದಕ್ಷಿಣ ಆಫ್ರಿಕಾ ವಿರುದ್ಧ ಸರಣಿ: ಭಾರತ ಮಹಿಳಾ ತಂಡ ಪ್ರಕಟ
Next articleಬುದ್ಧಿವಂತಿಕೆ ಅಡವಿಟ್ಟಿರುವುದು ಸಾಬೀತಾಗಿದೆ