Home ಅಪರಾಧ ನೇಣು ಬಿಗಿದುಕೊಂಡು ಶಿರಸ್ತೇದಾರ ಆತ್ಮಹತ್ಯೆ

ನೇಣು ಬಿಗಿದುಕೊಂಡು ಶಿರಸ್ತೇದಾರ ಆತ್ಮಹತ್ಯೆ

0

ಹಿರೇಕೆರೂರು: ನ್ಯಾಯಾಲಯದಲ್ಲಿ ಶಿರಸ್ತೇದಾರರಾಗಿದ್ದ ವ್ಯಕ್ತಿ ಸರ್ಕಾರಿ ನೌಕರರ ಭವನದಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾದ ಘಟನೆ ನಡೆದಿದೆ.
ಹಿರೇಕೆರೂರಿನ ತಂಬಾಕದ ನಗರದ ನಿವಾಸಿ ಮಲ್ಲಿಕಾರ್ಜುನ ಶಂಕರಪ್ಪ ಭರಗಿ(42) ಆತ್ಮಹತ್ಯೆ ಮಾಡಿಕೊಂಡ ಶಿರಸ್ತೇದಾರ್.
ಮೂಲತಃ ಬಾಗಲಕೋಟೆ ಜಿಲ್ಲೆಯ ಬಾದಾಮಿ ತಾಲೂಕಿನ ಕಟಗೇರ ಗ್ರಾಮದವರಾಗಿದ್ದಾರೆ. ಆತ್ಮಹತ್ಯೆಗೂ ಮುನ್ನ ಬರೆದಿಟ್ಟಿರುವ ಡೆತ್‌ನೋಟ್ ಪತ್ತೆಯಾಗಿದ್ದು, ಇದರಲ್ಲಿ ನಾಲ್ವರ ಕಿರುಕುಳದಿಂದ ಬೇಸತ್ತು ಆತ್ಮಹತ್ಯೆ ಮಾಡಿಕೊಳ್ಳುತ್ತಿರುವುದಾಗಿ ತಿಳಿಸಿದ್ದಾರೆ. ಅಲ್ಲದೇ ಈ ನಾಲ್ವರ ಹೆಸರನ್ನು ವಾಟ್ಸಾಪ್ ಸ್ಟೇಟಸ್‌ನಲ್ಲಿ ಹಾಕಿ ಅವರಿಗೆ ಜಯವಾಗಲಿ ಎಂದು ಬರೆದಿದ್ದರು. ತಾನು ಬೇರೆ ಮಹಿಳೆಯೊಂದಿಗೆ ಅಕ್ರಮ ಸಂಬಂಧ ಹೊಂದಿದ್ದರ ಬಗ್ಗೆಯೂ ಡೆತ್‌ನೋಟ್‌ನಲ್ಲಿ ಹೇಳಿಕೊಂಡಿದ್ದಾರೆ. ಈ ಹಿನ್ನೆಲೆಯಲ್ಲಿ ಮೃತ ಮಲ್ಲಿಕಾರ್ಜುನ ಅವರ ಪತ್ನಿ ಭಾರತಿ ಅವರು ನಾಲ್ವರ ವಿರುದ್ಧ ಪೊಲೀಸರಿಗೆ ದೂರು ನೀಡಿದ್ದಾರೆ.

Exit mobile version