Home News ಪರೀಕ್ಷಾ ಭಯ: ಪಿಯುಸಿ ವಿದ್ಯಾರ್ಥಿ ಆತ್ಮಹತ್ಯೆ

ಪರೀಕ್ಷಾ ಭಯ: ಪಿಯುಸಿ ವಿದ್ಯಾರ್ಥಿ ಆತ್ಮಹತ್ಯೆ

ಖಾನಾಪುರ: ಸೋಮವಾರದಿಂದ ಆರಂಭಗೊಂಡ ದ್ವಿತೀಯ ಪಿಯುಸಿ ಪರೀಕ್ಷೆಯನ್ನು ಎದುರಿಸಲು ಭಯಪಟ್ಟ ವಿದ್ಯಾರ್ಥಿಯೋರ್ವ ತನ್ನ ಮನೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಪಟ್ಟಣದ ಹೊರವಲಯದ ಹೊಣಕಲ್ ಗ್ರಾಮದಲ್ಲಿ ನಡೆದಿದೆ.
ಗ್ರಾಮದ ಚೇತನ ರಮೇಶ ತೋರಾಳಕರ(೧೮) ಮೃತ ವಿದ್ಯಾರ್ಥಿ. ಪಟ್ಟಣದ ಖಾಸಗಿ ಪಿಯು ಕಾಲೇಜಿನಲ್ಲಿ ವಾಣಿಜ್ಯ ವಿಭಾಗದಲ್ಲಿ ಓದುತ್ತಿದ್ದ ಚೇತನ, ಪರೀಕ್ಷೆಯನ್ನು ಎದುರಿಸಲು ಭಯಪಟ್ಟು ಮನೆಯಲ್ಲಿ ಯಾರೂ ಇಲ್ಲದ ಸಂದರ್ಭದಲ್ಲಿ ತನ್ನ ಕೊಠಡಿಯಲ್ಲಿ ನೇಣಿಗೆ ಶರಣಾಗಿದ್ದು, ಘಟನಾ ಸ್ಥಳಕ್ಕೆ ಖಾನಾಪುರ ಠಾಣೆಯ ಪೊಲೀಸರು ಭೇಟಿ ನೀಡಿ, ಪ್ರಕರಣದ ತನಿಖೆ ಕೈಗೊಂಡಿದ್ದಾರೆ.

Exit mobile version