ಪೊಲೀಸ್ ಠಾಣೆಯ ಮಹಡಿಯಿಂದ ಆತ್ಮಹತ್ಯೆಗೆ ಯತ್ನಿಸಿದ ಮಹಿಳೆ

0
10

ಚಿಕ್ಕಮಗಳೂರು: ಮಹಿಳೆಯೊಬ್ಬರು ಪೊಲೀಸ್ ಠಾಣೆಯ ಮಹಡಿ ಮೇಲೇರಿ ಆತ್ಮಹತ್ಯೆಗೆ ಯತ್ನಿಸಿದ ಘಟನೆ ಹಾಗೂ ಪ್ರಕರಣದ ವಿಡಿಯೋ ಸಾಮಾಜಿಕ ಕಾಲತಾಣಗಳಲ್ಲಿ ವೈರಲ್ ಆಗಿದೆ.
ಮೂಡಿಗೆರೆಯಲ್ಲಿ ಶುಕ್ರವಾರ ಬೆಳಗ್ಗೆ ಹಳೇ ಮೂಡಿಗೆರೆ ಗ್ರಾಮದ ಶಿಲ್ಪ ಎಂಬವರೇ ಆತ್ಮಹತ್ಯೆಗೆ ಯತ್ನಿಸಿದ ಮಹಿಳೆ ಎಂದು ತಿಳಿದು ಬಂದಿದೆ.

ಆತ್ಮಹತ್ಯೆಗೆ ಯತ್ನಿಸಿದ ಮಹಿಳೆಯನ್ನ ಕೂಡಲೇ ಎಚ್ಚೆತ್ತ ಪೊಲೀಸರು ರಕ್ಷಿಸಿ ಸಮಾಧಾನ ಮಾಡಿದ್ದಾರೆನ್ನಲಾಗಿದ್ದು, ಮಹಿಳೆಗೆ ಪ್ರಕರಣವೊಂದರಲ್ಲಿ ಕೋರ್ಟ್‌ ಸಮನ್ಸ್ ಜಾರಿಗೊಳಿಸಿತ್ತು. ಇದರಿಂದ ಬೇಸತ್ತು ಮಹಿಳೆ ಆತ್ಮಹತ್ಯೆಗೆ ಯತ್ನಿಸಿದ್ದಾಳೆ ಎಂದು ಪೊಲೀಸರು ತಿಳಿಸಿದ್ದಾರೆ.

ಮಹಿಳಾ ಪೊಲೀಸ್ ಸಿಬ್ಬಂದಿ ಮೇಲೆ ಹಲ್ಲೆ ನಡೆಸಿದ ಆರೋಪಕ್ಕೆ ಸಂಬಂಧಿಸಿ 2022ರಲ್ಲಿ ಮೂಡಿಗೆರೆ ಠಾಣೆಯಲ್ಲಿ ದೂರು ದಾಖಲಾಗಿತ್ತು. ಕಳೆದ ಒಂದು ವರ್ಷದಿಂದ ನ್ಯಾಯಾಲಯಕ್ಕೆ ಹಾಜರಾಗದ ಕಾರಣಕ್ಕೆ ಶಿಲ್ಪ ವಿರುದ್ಧ ಸಮನ್ಸ್ ಜಾರಿಗೊಳಿಸಲಾಗಿತ್ತು ಎಂದು ಹೇಳಲಾಗಿದೆ.

Previous articleಗೆಲ್ಲುವ ಪಕ್ಷಗಳಲ್ಲಿ ಆಕಾಂಕ್ಷಿ ಹೆಚ್ಚು
Next articleಬಾಗಲಕೋಟೆಯಲ್ಲಿ ಸಹೋದರರ ಸವಾಲ್ ಫಿಕ್ಸ್..!