ಬಸ್-ಕಾರು ಮುಖಾಮುಖಿ ಡಿಕ್ಕಿ: ಇಬ್ಬರಿಗೆ ಗಾಯ

0
9

ಬಾಗಲಕೋಟೆ(ಕುಳಗೇರಿ ಕ್ರಾಸ್): ಕೆಎಸ್‌ಆರ್‌ಟಿಸಿ ಬಸ್ ಹಾಗೂ ಕಾರು ನಡುವೆ ಮುಖಾಮುಖಿ ಡಿಕ್ಕಿ ಹೊಡೆದ ಪರಿಣಾಮ ಕಾರಿನಲ್ಲಿದ್ದ ಚಾಲಕ ಸೇರಿ ಇಬ್ಬರು ಪ್ರಯಾಣಿಕರಿಗೆ ತೀವ್ರ ಗಾಯಗಳಾಗಿರುವ ಘಟನೆ ಗ್ರಾಮದ ರಾಷ್ಟ್ರೀಯ ಹೆದ್ದಾರಿ 218ರಲ್ಲಿ ನಡೆದಿದೆ.
ಖಾನಾಪೂರ ಎಸ್‌ಕೆ ಗ್ರಾಮದ ಕಣಿವೆಯಲ್ಲಿ ಈ ಘಟನೆ ಸಂಭವಿಸಿದ್ದು ಗಾಯಾಳುಗಳನ್ನ 108 ಆಂಬ್ಯುಲೆನ್ಸ್‌ನಲ್ಲಿ ತಾಲೂಕು ಆಸ್ಪತ್ರೆಗೆ ಸಾಗಿಸಲಾಗಿದೆ. ಸಾರಿಗೆ ಬಸ್ ಡಿಕ್ಕಿ ಹೊಡೆದ ರಭಸಕ್ಕೆ ಕಾರಿನ ಮುಂಭಾಗ ನಜ್ಜುಗುಜ್ಜಾಗಿದೆ. ಗುಳೇದಗುಡ್ಡ ಡಿಪೋಗೆ ಸೇರಿದ ಸಾರಿಗೆ ಸಂಸ್ಥೆ ಬಸ್ ಹುಬ್ಬಳ್ಳಿಗೆ ಹೊರಟಿದ್ದು, ಹುಬ್ಬಳ್ಳಿಯಿಂದ ಬಾದಾಮಿಗೆ ಬರುತ್ತಿದ್ದ ಕಾರ್‌ಗೆ ಡಿಕ್ಕಿ ಹೊಡೆದಿದೆ. ಅದೃಷ್ಟವಶಾತ್ ಯಾವುದೇ ಪ್ರಾಣ ಹಾನಿ ಸಂಭವಿಸಿಲ್ಲ.

Previous articleಗುತ್ತಿಗೆದಾರ ಸಂತೋಷ್ ಆತ್ಮಹತ್ಯೆ ಪ್ರಕರಣ: ಈಶ್ವರಪ್ಪ ನಿರಾಳ
Next articleಗರ್ಭಿಣಿ ಹತ್ಯೆ ಮಾಡಿದ್ದ ಪತಿ ಸೇರಿ ನಾಲ್ವರಿಗೆ ಜೀವಾವಧಿ ಶಿಕ್ಷೆ