Home ಅಪರಾಧ ಬಸ್‌-ಲಾರಿ-ಬೈಕ್‌ ಅಪಘಾತ: ಮಹಿಳೆ ಸಾವು, ಇಬ್ಬರು ಗಂಭೀರ

ಬಸ್‌-ಲಾರಿ-ಬೈಕ್‌ ಅಪಘಾತ: ಮಹಿಳೆ ಸಾವು, ಇಬ್ಬರು ಗಂಭೀರ

0

ಬೆಂಗಳೂರು: ಕೆಎಸ್ಆರ್‌ಟಿಸಿ ಬಸ್‌, ಸರಕು ಸಾಗಣೆ ಲಾರಿ ಮತ್ತು ಬೈಕ್ ನಡುವೆ ಅಪಘಾತ ಸಂಭವಿಸಿ ಬೈಕ್‌ನಲ್ಲಿದ್ದ ಓರ್ವ ಮಹಿಳೆ ಸಾವನ್ನಪ್ಪಿದ್ದು, ಇಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ.
ಬೆಂಗಳೂರು-ಮೈಸೂರು ರಸ್ತೆಯ ನಾಯಂಡಹಳ್ಳಿ ಜಂಕ್ಷನ್‌ಬಳಿ ಅಪಘಾತ ನಡೆದಿದೆ. ಲಾರಿ ಮತ್ತು ಬಸ್ಸಿನ ನಡುವೆ ಸಿಲುಕಿಕೊಂಡ ಬೈಕ್‌ ಸವಾರರಲ್ಲಿ ಹಿಂಬದಿ ಕುಳಿತಿದ್ದ ಮಹಿಳೆ ಸ್ಥಳದಲ್ಲಿಯೇ ಸಾವನ್ನಪ್ಪಿದ್ದಾಳೆ. ಇನ್ನು ಇಬ್ಬರು ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದು, ಅವರ ಸ್ಥಿತಿಯೂ ಗಂಭೀರವಾಗಿದೆ ಎನ್ನಲಾಗಿದೆ.
ನಾಯಂಡಹಳ್ಳಿ ಜಂಕ್ಷನ್‌ ಅಪಘಾತದಲ್ಲಿ ಸ್ಥಳದಲ್ಲಿ ನೂರಾರು ಜನರು ಜಮಾವಣೆ ಆಗಿದ್ದು, ಇದರಿಂದ ವಾಹನ ಸಂಚಾರಕ್ಕೆ ತೀವ್ರ ಅಡ್ಡಿಯುಂಟಾಗಿತ್ತು. ಇನ್ನು ಟ್ರಾಫಿಕ್‌ ನಿಯಂತ್ರಣಕ್ಕೆ ತರಲು ಪೊಲೀಸರು ಜನರ ಮೇಲೆ ಲಘು ಲಾಠಿ ಪ್ರಹಾರ ಮಾಡಿದ್ದಾರೆ.

Exit mobile version