Home ಅಪರಾಧ ಬಿಜೆಪಿ ಮುಖಂಡ ಮಣಿಕಂಠ ರಾಠೋಡ್‌ ಬಂಧನ

ಬಿಜೆಪಿ ಮುಖಂಡ ಮಣಿಕಂಠ ರಾಠೋಡ್‌ ಬಂಧನ

0

ಕಲಬುರಗಿ: ಬಿಜೆಪಿ ನಾಯಕ ಮಣಿಕಂಠ ರಾಠೋಡ್‌ನನ್ನು ನಿನ್ನೆ ತಡರಾತ್ರಿ ಚಿತ್ತಾಪುರ ಪೊಲೀಸರು ಬಂಧಿಸಿರುವುದು ವರದಿಯಾಗಿದೆ. ಪೊಲೀಸರು ರಾತ್ರೋರಾತ್ರಿ ಬಂಧಿಸಿ ಕರೆದೊಯ್ದಿದ್ದು ರಾತ್ರಿಯೇ ರಾಠೋಡ್‌ ಸ್ವೇಶನ್‌ ಜಾಮೀನು ಮೇಲೆ ಹೂರ ಬಂದಿದ್ದಾರೆ ಎಂದು ತಿಳಿದು ಬಂದಿದೆ. ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ಕುಟುಂಬಕ್ಕೆ ಹತ್ಯೆ ಬೆದರಿಕೆ ಹಾಕಿದ್ದ ಆಡಿಯೋ ವೈರಲ್ ಪ್ರಕರಣ ಮೇ 6 ರಂದು ಚಿತ್ತಾಪುರ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.
ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ಕುಟುಂಬಕ್ಕೆ ಹತ್ಯೆ ಬೆದರಿಕೆ ಹಾಕಿದ್ದ ಆಡಿಯೋ ವೈರಲ್ ಪ್ರಕರಣ ಕಳೆದ ವರ್ಷ ನವೆಂಬರ್ ತಿಂಗಳಲ್ಲಿ ಪ್ರಿಯಾಂಕ್ ಖರ್ಗೆ ಅವರ ಮೇಲೆ ಗುಂಡು ಹಾರಿಸಲು ಸಿದ್ಧ ಎಂದು ಮಣಿಕಂಠ ಅವರು ಹೇಳಿಕೆ ನೀಡಿದ್ದರು. ಈ ಪ್ರಕರಣ ಸಂಬಂಧ ದಾಖಲಾಗಿದ್ದ ದೂರಿನ ಅನ್ವಯ ಪೊಲೀಸರು ಮಣಿಕಂಠರನ್ನು ಬಂಧಿಸಿದ್ದರು. ನಂತರ ಜಾಮೀನಿನ ಮೇಲೆ ಬಿಡುಗಡೆ ಮಾಡಿದ್ದರು. ಮಣಿಕಂಠ ರಾಠೋಡ್ ವಿರುದ್ಧ ದಾಖಲಾಗಿರುವ ದೂರು ಇದು ಮೊದಲನೆಯದ್ದಲ್ಲ. ಚಿತ್ತಾಪುರ ಪೊಲೀಸ್ ಠಾಣೆಯಲ್ಲಿ ಮಾತ್ರವಲ್ಲದೆ, ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಸುಮಾರು 40 ಕ್ರಿಮಿನಲ್ ಪ್ರಕರಣಗಳು ದಾಖಲಾಗಿವೆ. ಕೊಲೆ, ಡ್ರಗ್ಸ್ ಮತ್ತು ಮಾದಕವಸ್ತುಗಳ ಕಳ್ಳಸಾಗಣೆ, ಕ್ರಿಮಿನಲ್ ಬೆದರಿಕೆ, ಶಸ್ತ್ರಾಸ್ತ್ರಗಳನ್ನು ಅಕ್ರಮವಾಗಿ ಹೊಂದಿರುವುದು ಸೇರಿದಂತೆ ಅನೇಕ ವಿಚಾರಗಳಲ್ಲಿ ಪ್ರಕರಣ ದಾಖಲಾಗಿವೆ.

Exit mobile version