ಬೆಂಗಳೂರು : ಬೆಂಗಳೂರಿನ ಪ್ರಭಾವಿ ಬಿಜೆಪಿ ಶಾಸಕ ಬೊಮ್ಮನಹಳ್ಳಿ ಬಿಜೆಪಿ ಶಾಸಕ ಸತೀಶ್ ರೆಡ್ಡಿ ಕೊಲೆಗೆ ಸುಪಾರಿ ಪ್ರಕರಣ ಬೊಮ್ಮನಹಳ್ಳಿ ಪೊಲೀಸ್ ಠಾಣೆಯಲ್ಲಿ ಕೇಸ್ ದಾಖಲಾಗಿತ್ತು, ಶಾಸಕ ಸತೀಶ್ ರೆಡ್ಡಿ ಆಪ್ತನಿಂದ ಪೊಲೀಸ್ ಠಾಣೆಗೆ ದೂರು ಬಂದಿದ್ದು. ಪೊಲೀಸರು ದೂರು ಬಂದ ಕೂಡಲೇ ಅಲಾರ್ಟ್ ಆಗಿದ್ದು, ಶಾಸಕರ ಆಪ್ತರು ನೀಡಿದ ಮಾಹಿತಿ ಮೇರೆಗೆ ಇಬ್ಬರನ್ನು ವಶಕ್ಕೆ ಪಡೆದಿದ್ದಾರೆ. ಜಿಲ್ಲೆಯ ಹೊಳಲ್ಕೆರೆ ತಾಲ್ಲೂಕಿನ ಉಗಣೆಕಟ್ಟೆ ಗ್ರಾಮದ ಗಿರೀಶ್ ಮತ್ತೋರ್ವ ಅದೇ ಗ್ರಾಮದ 17 ವರ್ಷದ ಅಪ್ರಾಪ್ತನ ಬಂಧನ ಮಾಡಿ ತನಿಖೆ ಚುರುಕುಗೊಳಿಸಿದ್ದಾರೆ.