Home ಅಪರಾಧ ಬೀರೇಶ್ವರ ಕೋ ಆಪ್ ಕ್ರೆಡಿಟ್ ಸೊಸೈಟಿಯಲ್ಲಿ ಕಳ್ಳತನ

ಬೀರೇಶ್ವರ ಕೋ ಆಪ್ ಕ್ರೆಡಿಟ್ ಸೊಸೈಟಿಯಲ್ಲಿ ಕಳ್ಳತನ

0

ಧಾರವಾಡ: ನಗರದ ಕೋರ್ಟ್ ಸರ್ಕಲ್ ಬಳಿ ಇರುವ ಬೀರೇಶ್ವರ ಕೋ ಆಪ್ ಕ್ರೆಡಿಟ್ ಸೊಸೈಟಿಯಲ್ಲಿ ಕಳೆದ ರಾತ್ರಿ ಕಳ್ಳತನ ನಡೆದಿದೆ.
ಸಚಿವೆ ಶಶಿಕಲಾ ಜೊಲ್ಲೆ ಹಾಗೂ ಸಂಸದ ಅಣ್ಣಾಸಾಹೇಬ ಜೊಲ್ಲೆ ಅವರಿಗೆ ಸೇರಿದ ಸೊಸೈಟಿ ಇದಾಗಿದ್ದು, ಸುಮಾರು ೨೦ ಲಕ್ಷ ನಗದು ಹಾಗೂ ೨೦ ಲಕ್ಷ‌ ಮೌಲ್ಯದ ಚಿನ್ನಾಭರಣ ಕಳ್ಳತನವಾಗಿದೆ ಎಂದು ತಿಳಿದು ಬಂದಿದೆ.
ಸಿಸಿಟಿವಿ ಹಾಗೂ ಸೊಸೈಟಿಯ ದಾಖಲೆ ಸುಟ್ಟಿರುವ ಕಳ್ಳರು ಸಿಸಿಟಿವಿಯ ಡಿವಿಆರ್ ಹೊತ್ತೊಯ್ದಿದ್ದಾರೆ. ಸ್ಥಳಕ್ಕೆ ಧಾರವಾಡ ಎಸಿಪಿ ವಿಜಯ ತಳವಾರ್ ಭೇಟಿ ನೀಡಿ ಪರಿಶೀಲಿಸಿದ್ದಾರೆ.

Exit mobile version