Home ಅಪರಾಧ ಬೆಳಗಾವಿ: ಟೋಲ್ ಗೇಟ್ ನಲ್ಲಿ ದಾಖಲೆ ರಹಿತ ಎರಡು ಕೋಟಿ ನಗದು ವಶ

ಬೆಳಗಾವಿ: ಟೋಲ್ ಗೇಟ್ ನಲ್ಲಿ ದಾಖಲೆ ರಹಿತ ಎರಡು ಕೋಟಿ ನಗದು ವಶ

0

ಬೆಳಗಾವಿ: ಸೂಕ್ತ ದಾಖಲೆಗಳಿಲ್ಲದೇ ಖಾಸಗಿ ಬಸ್ ನಲ್ಲಿ ಸಾಗಿಸಲಾಗುತ್ತಿದ್ದ ಎರಡು ಕೋಟಿ ರೂಪಾಯಿ ನಗದು ಹಣವನ್ನು ಹಿರೇಬಾಗೇವಾಡಿ ಟೋಲ್ ಗೇಟ್ ನಲ್ಲಿ ವಶಪಡಿಸಿಕೊಳ್ಳಲಾಗಿದೆ.

ಮುಂಬೈಯಿಂದ ಬೆಂಗಳೂರಿಗೆ ಹೊರಟಿದ್ದ ಖಾಸಗಿ ಬಸ್(KA 70 1459) ಅನ್ನು ನಸುಕಿನಜಾವ 3.30 ರ ವೇಳೆಗೆ ಚುನಾವಣಾ ಕಾರ್ಯನಿರತ ಎಫ್‌ಎಸ್ ಟಿ ಹಾಗೂ ಪೊಲೀಸ್ ಅಧಿಕಾರಿಗಳ ತಂಡ ಜಂಟಿಯಾಗಿ ಪರಿಶೀಲನೆ‌ ನಡೆಸಿದಾಗ ಅಕ್ರಮ ಹಣ ಪತ್ತೆಯಾಗಿರುತ್ತದೆ.

ಕೆ.ಪಿ.ಆ್ಯಕ್ಟ್ ಪ್ರಕಾರ ಪ್ರಕರಣವನ್ನು ದಾಖಲಿಸಿಕೊಂಡು ಆದಾಯ ತೆರಿಗೆ ಇಲಾಖೆಯ ಅಧಿಕಾರಿಗಳಿಗೆ‌ ಮಾಹಿತಿಯನ್ನು ನೀಡಲಾಗಿರುತ್ತದೆ ಎಂದು ಜಿಲ್ಲಾಧಿಕಾರಿ ನಿತೇಶ್ ಪಾಟೀಲ ಅವರು ತಿಳಿಸಿದ್ದಾರೆ.
ಸುದ್ದಿ ತಿಳಿದ ತಕ್ಷಣವೇ ಜಿಲ್ಲಾಧಿಕಾರಿ ನಿತೇಶ್ ಪಾಟೀಲ ಹಾಗೂ ಅವರು ಭೇಟಿ ಪ್ರಕರಣವನ್ನು ಪರಿಶೀಲಿಸಿದರು.
ಹಿರೇಬಾಗೇವಾಡಿ ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಂಡು ತನಿಖೆ ಮುಂದುವರಿಸಲಾಗಿರುತ್ತದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಒಬ್ಬ ವ್ಯಕ್ತಿಯನ್ನು ಬಂಧಿಸಲಾಗಿರುತ್ತದೆ.
ಡಿಸಿಪಿ ಸ್ನೇಹಾ, ಗ್ರಾಮೀಣ ಎಸಿಪಿ ಗೋಪಾಲಕೃಷ್ಣ ಗೌಡರ, ಬೆಳಗಾವಿ ಗ್ರಾಮೀಣ ಕ್ಷೇತ್ರದ ಚುನಾವಣಾಧಿಕಾರಿ ರಾಜಶೇಖರ್ ಡಂಬಳ, ಸಿಪಿಐ ಅಮರೇಶ್, ಎಫ್.ಎಸ್.ಟಿ. ತಂಡದ ಶಂಭುಲಿಂಗಪ್ಪ, ರಾಜೇಂದ್ರ ಮೊರಬದ ಅವರು ಕಾರ್ಯಾಚರಣೆಯಲ್ಲಿ ಪಾಲ್ಗೊಂಡಿದ್ದರು.

ಪೊಲೀಸ್ ಹಾಗೂ ಎಫ್.ಎಸ್.ಟಿ. ತಂಡದ ಕಾರ್ಯವನ್ನು ಜಿಲ್ಲಾಧಿಕಾರಿ ನಿತೇಶ್ ಪಾಟೀಲ ಹಾಗೂ ಪೊಲೀಸ್ ಆಯುಕ್ತರಾದ ಡಾ.ಎಂ.ಬಿ.ಬೋರಲಿಂಗಯ್ಯ ಅವರು ಶ್ಲಾಘಿಸಿದ್ದಾರೆ.


Exit mobile version