ಬೇಲೂರು ರಥೋತ್ಸವದಲ್ಲಿ ಕುರಾನ್ ಪಠಣ ವಿರೋಧಿಸಿ ಹಿಂದೂ ಸಂಘಟನೆಗಳಿಂದ ಪ್ರತಿಭಟನೆ..!

0
16
ಕುರಾನ್‌

ಹಾಸನ: ಐತಿಹಾಸಿಕ ಬೇಲೂರು ಚನ್ನಕೇಶವ ರಥೋತ್ಸವದ ಸಂದರ್ಭದಲ್ಲಿ ಕುರಾನ್ ಪಠಣಕ್ಕೆ ವಿರೋಧ ವ್ಯಕ್ತಪಡಿಸಿ ಇಂದು ಹಿಂದೂಪರ ಸಂಘಟನೆ ಕಾರ್ಯಕರ್ತರು ಬೇಲೂರಿನ ದೇವಾಲಯ ರಸ್ತೆಯಲ್ಲಿ ಪ್ರತಿಭಟನೆ ನಡೆಸಿದರು. ರಥೋತ್ಸವದ ವೇಳೆ ಕುರಾನ್ ಪಠಣೆ ಮಾಡಲು ಅವಕಾಶ ನೀಡಬಾರದು ಎಂದು ಆಗ್ರಹಿಸಿದರು. ಈ ವೇಳೆ ಮುಸ್ಲಿಂ ಯುವಕ ಬೈಕ್​ನಲ್ಲಿ ಬಂದು ‘ಕುರಾನ್ ಜಿಂದಾಬಾದ್​’ ಎಂದು ಕೂಗಿದ್ದಾನೆ. ಘೋಷಣೆ ಕೂಗಿದ್ದು, ಬಜರಂಗದಳ ಕಾರ್ಯಕರ್ತರು, ಮುಸ್ಲಿಂ ಯುವಕನ ನಡುವೆ ವಾಗ್ವಾದ ನಡೆದಿದೆ. ಪರಿಸ್ಥಿತಿ ನಿಯಂತ್ರಿಸಲು ಪೊಲೀಸರು ಲಘು ಲಾಠಿ ಪ್ರಹಾರ ಮಾಡಿದ್ದಾರೆ. ಸ್ಥಳದಲ್ಲಿ ಬಿಗುವಿನ ವಾತಾವರಣ ನಿರ್ಮಾಣವಾಗಿದ್ದು ಪೊಲೀಸ್ ಬಿಗಿ ಬಂದೋಬಸ್ತ್ ಕೈಗೊಳ್ಳಲಾಗಿದೆ. ಪೊಲೀಸರು ಮುಸ್ಲಿಂ ಯುವಕನನ್ನು ವಶಕ್ಕೆ ಪಡೆದಿದ್ದಾರೆ. ಹಿಂದೂಪರ ಸಂಘಟನೆಗಳು ರಸ್ತೆ ತಡೆದು ಪ್ರತಿಭಟನೆ ಮುಂದುವರೆಸಿದ್ದಾರೆ.

Previous articleಚಾಕುವಿನಿಂದ ಇರಿದು ತಂದೆಯಿಂದ ಮಗನ ಕೊಲೆ
Next articleಪ್ಯಾನ್‌-ಆಧಾರ್ ಲಿಂಕ್: ಗಡುವು ವಿಸ್ತರಣೆ