ರಾಯಚೂರು: ನಗರದ ಸ್ಟೇಷನ್ ರಸ್ತೆಯಲ್ಲಿ ಬೈಕ್‌ಗೆ ಡಿಕ್ಕಿ ತಪ್ಪಿಸಲು ಹೋಗಿ ವಿದ್ಯಾರ್ಥಿನಿಯರಿಗೆ ಕಾರು ಡಿಕ್ಕಿ ಹೊಡೆದ ಘಟನೆ ತಡವಾಗಿ ಬೆಳಕಿಗೆ ಬಂದಿದ್ದು, ಭೀಕರ ಅಪಘಾತದ ದೃಶ್ಯಾವಳಿ ಸಿಸಿ ಕ್ಯಾಮೆರಾದಲ್ಲಿ ಸೆರೆಯಾಗಿದೆ.
ನಗರದ ಸ್ಟೇಷನ್ ವೃತ್ತದಿಂದ ಅತೀವೇಗದಲ್ಲಿ ಬರುತ್ತಿದ್ದ ಕಾರು ರಸ್ತೆ ವಿಭಜಕದಲ್ಲಿ ಯೂಟರ್ನ್ ತೆಗೆದುಕೊಳ್ಳುತ್ತಿದ್ದ ಬೈಕ್‌ಗೆ ಡಿಕ್ಕಿ ಹೊಡೆದು ಬಳಿಕ ವಿದ್ಯಾರ್ಥಿನಿಯರಿಗೆ ಡಿಕ್ಕಿ ಹೊಡೆದಿದೆ. ಬೈಕ್ ಸವಾರ ಶಿವರಾಜ್ ಪಾಟೀಲ್‌ಗೆ ಕಾಲು ಮುರಿತವಾಗಿದ್ದು, ರಿಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾನೆ.
ರಸ್ತೆ ಬದಿಯಲ್ಲಿ ಹೋಗುತ್ತಿದ್ದ ನಾಲ್ಕು ಜನ ಕಾಲೇಜು ವಿದ್ಯಾರ್ಥಿನಿಯರಲ್ಲಿ ಇಬ್ಬರಿಗೆ ಕಾರು ಡಿಕ್ಕಿ ಹೊಡೆದಿದ್ದು, ವಿದ್ಯಾರ್ಥಿನಿಯರಾದ ಜ್ಯೋತಿ ಹಾಗೂ ಶಿವಮಂಗಳಗೆ ಸಣ್ಣಪುಟ್ಟ ಗಾಯಗಳಾಗಿವೆ. ರಾಯಚೂರು ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಕಾರನ್ನು ವಶಕ್ಕೆ ಪಡೆದಿರುವ ಪೊಲೀಸರು ವಿಚಾರಣೆ ಮುಂದುವರೆಸಿದ್ದಾರೆ.
ಈ ಘಟನೆಯು ಕಳೆದ ನಾಲ್ಕೈದು ದಿನಗಳ ಹಿಂದೆ ನಡೆದಿದೆ ಎಂದು ತಿಳಿದುಬಂದಿದೆ. ರಾಯಚೂರು ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.