ಮಣ್ಣು ಕುಸಿತ: ಮೂವರು ಕಾರ್ಮಿಕರು ಸಾವು

0
11
ಕಾರ್ಮಿಕರು ಸಾವು

ಮಂಗಳೂರು: ನಿರ್ಮಾಣ ಕಾಮಗಾರಿ ವೇಳೆ ಮಣ್ಣು ಕುಸಿದು ಮೂವರು ಕಾರ್ಮಿಕರು ಮಣ್ಣಿನಡಿ ಸಿಲುಕಿ ಮೃತಪಟ್ಟ ಘಟನೆ ನಗರ ಪಂಚಾಯತ್ ವ್ಯಾಪ್ತಿಯ ಸುಳ್ಯ ಪೇಟೆ ಸಮೀಪದ ಆಲೆಟ್ಟಿ ರಸ್ತೆಯ ಗುರುಂಪು ಎಂಬಲ್ಲಿ ಘಟನೆ ನಡೆದಿದೆ.
ಗದಗ ಜಿಲ್ಲೆಯ ಮುಂಡರಗಿ ತಾಲೂಕಿನ ಹಿರೇಗೊಡ್ಡೆಟ್ಟಿ ಸೋಮಶೇಖರ್ ರೆಡ್ಡಿ(೪೫), ಅವರ ಪತ್ನಿ ಶಾಂತಕ್ಕ (೩೫), ಇನ್ನೋರ್ವ ಮೃತರ ಹೆಸರು ತಿಳಿದುಬಂದಿಲ್ಲ.
ಸುಳ್ಯ ಖಾಸಗಿ ವ್ಯಕ್ತಿಯೋರ್ವರು ತಮ್ಮ ಮನೆ ಹಿಂಭಾಗದಲ್ಲಿ ತಡೆಗೋಡೆ ನಿರ್ಮಾಣಕ್ಕೆ ಪಿಲ್ಲರ್ ಕಾಮಗಾರಿ ನಡೆಸುತ್ತಿದ್ದರು. ಕಾರ್ಮಿಕರು ಇಂದು ಕೆಲಸ ನಿರ್ವಹಿಸುವ ವೇಳೆ ಒಮ್ಮೆಲೇ ಮಣ್ಣು ಕುಸಿದು ಬಿದ್ದಿದೆ. ಘಟನೆ ವೇಳೆ ಏಳು ಮಂದಿ ಸ್ಥಳದಲ್ಲಿದ್ದು ನಾಲ್ವರು ಓಡಿ ಪಾರಾಗಿದ್ದು, ಮೂವರು ಮಣ್ಣಿನಡಿ ಸಿಲುಕಿದ್ದರು. ಘಟನೆ ನಡೆದ ಕೂಡಲೇ ಜೆಸಿಬಿ ಮೂಲಕ ಮಣ್ಣಿನಡಿ ಸಿಲುಕಿದ್ದವರ ಹೊರತೆಗೆಯಲು ಕಾರ್ಯಾಚರಣೆ ಆರಂಭಿಸಲಾಗಿದ್ದು, ಮಣ್ಣಿನಡಿ ಸಿಲುಕಿದ್ದವರನ್ನು ಹೊರತಗೆಯುವ ವೇಳೆಗೆ ಅವರು ಮೃತಪಟ್ಟಿದ್ದರು ಎನ್ನಲಾಗಿದೆ.

Previous articleಕಾಂಗ್ರೆಸ್ಸಿಗರು 70ವರ್ಷ ಏನು ಕಡುಬು ತಿನ್ನುತ್ತಾ ಇದ್ರಾ?
Next articleಪ್ರಧಾನಿ ಮೋದಿ ಹಾಡಿ ಹೊಗಳಿದ ಬೊಮ್ಮಾಯಿ