Home ಅಪರಾಧ ಮುರುಘಾ ಶರಣರ ವಿರುದ್ಧ ನ್ಯಾಯಾಲಯಕ್ಕೆ ದೋಷಾರೋಪಪಟ್ಟಿ ಸಲ್ಲಿಕೆ

ಮುರುಘಾ ಶರಣರ ವಿರುದ್ಧ ನ್ಯಾಯಾಲಯಕ್ಕೆ ದೋಷಾರೋಪಪಟ್ಟಿ ಸಲ್ಲಿಕೆ

0

ಚಿತ್ರದುರ್ಗ: ಅಪ್ರಾಪ್ತ ಬಾಲಕಿಯರ ಮೇಲಿನ‌ ಲೈಂಗಿಕ ದೌರ್ಜನ್ಯ ಪ್ರಕರಣದ ಎರಡನೇ‌ ಪ್ರಕರಣಕ್ಕೆ‌ ಸಂಬಂದಿಸಿದಂತೆ ಪೊಲೀಸರು, ಮುರುಘಾ ಶರಣರ ವಿರುದ್ಧ ಜಿಲ್ಲಾ ‌ನ್ಯಾಯಾಲಯಕ್ಕೆ ದೋಷಾರೋಪಪಟ್ಟಿ ಸಲ್ಲಿಸಿದ್ದಾರೆ.

ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದ ಮೇರೆಗೆ ಪೋಕ್ಸೊ ಕಾಯ್ದೆಯಡಿ ಅ. ೧೩ರಂದು ಪ್ರಕರಣ ದಾಖಲಾಗಿತ್ತು. ಪ್ರಕರಣದ ತನಿಖೆ ನಡೆಸಿದ ಗ್ರಾಮಾಂತರ ಠಾಣೆಯ ಪೊಲೀಸರು ೨ನೇ ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯಕ್ಕೆ ದೋಷಾರೋಪಪಟ್ಟಿ ಸಲ್ಲಿಸಿದ್ದಾರೆ. ಮೊದಲ ಪ್ರಕರಣದ ದೋಷಾರೋಪಪಟ್ಟಿ ಸೋರಿಕೆ ಆಗಿದ್ದರಿಂದ ನ್ಯಾಯಾಲಯ ಅಸಮಾಧಾನ ವ್ಯಕ್ತಪಡಿಸಿತ್ತು. ಈ‌‌ ಹಿನ್ನಲೆಯಲ್ಲಿ‌ ಸೋರಿಕೆಯಾಗದಂತೆ ಪೊಲೀಸರು‌ ಎಚ್ಚರ ವಹಿಸಿದ್ದಾರೆ.

Exit mobile version