ರೆಡ್ಡಿ ದಂಪತಿ ಒಡೆತನದ ಆಸ್ತಿಗಳ ಜಪ್ತಿಗೆ ಆದೇಶ

0
8

ಬೆಂಗಳೂರು: ಜನಾರ್ದನ ರೆಡ್ಡಿ ದಂಪತಿಗೆ ಸೇರಿದ ಒಟ್ಟು 124 ಆಸ್ತಿಗಳ ಜಪ್ತಿ ಕೋರಿ ಸಿಬಿಐ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿತ್ತು. ಇದೀಗ ನ್ಯಾಯಾಲಯ ಭ್ರಷ್ಟಾಚಾರ ತಡೆ ಕಾಯ್ದೆ, ಕ್ರಿಮಿನಲ್ ಲಾ ತಿದ್ದುಪಡಿ ಕಾಯ್ದೆಯಡಿಯಲ್ಲಿ ಒಟ್ಟು 77 ಆಸ್ತಿಗಳನ್ನು ಜಪ್ತಿ ಮಾಡುವಂತೆ ಆದೇಶ ಹೊರಡಿಸಿದೆ. ಕ್ರಿಮಿನಲ್ ಕೇಸ್ ಮುಗಿಯುವವರೆಗೆ ಶಾಸಕ ಜನಾರ್ದನ ರೆಡ್ಡಿ ಮತ್ತು ಪತ್ನಿ ಲಕ್ಷ್ಮೀ ಅರುಣಾ ರೆಡ್ಡಿಗೆ ಸೇರಿದ ಆಸ್ತಿ ಜಪ್ತಿ ಮಾಡುವಂತೆ ಸಿಬಿಐ ವಿಶೇಷ ಕೋರ್ಟ್​ ಆದೇಶ ಹೊರಡಿಸಿದ್ದು.
ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಾಲಯ ಭ್ರಷ್ಟಾಚಾರ ತಡೆ ಕಾಯ್ದೆ, ಕ್ರಿಮಿನಲ್ ಲಾ ತಿದ್ದುಪಡಿ ಕಾಯ್ದೆಯಡಿಯ 75 ಆಸ್ತಿಗಳ ಜಪ್ತಿಗೆ ಆದೇಶ ನೀಡಿದೆ. 2009 ಜನವರಿ ನಂತರ ಖರೀದಿಸಿದ ಆಸ್ತಿ ಜಪ್ತಿಗೆ ಆದೇಶ ನೀಡಲಾಗಿದೆ.

Previous articleರಸ್ತೆ ಅಪಘಾತ: ಸ್ಥಳದಲ್ಲಿ ಮೂರು ಜನರ ಸಾವು
Next articleಗ್ಯಾರಂಟಿಗಳಿಗೆ ಎಲ್ಲಿಂದ ಹಣ ತರುತ್ತಾರೆ?