ಲಾರಿ ಹಾಗೂ ಕುರಿ ತುಂಬಿದ್ದ ಅಶೋಕ್ ಲೇಲ್ಯಾಂಡ್ ನಡುವೆ ಭೀಕರ ಅಪಘಾತ: ಇಬ್ಬರು ಕುರಿಗಾಹಿಗಳು ಸಾವು

0
9

ಚಿತ್ರದುರ್ಗ: ಚಲಿಸುತ್ತಿದ್ದ ಲಾರಿಗೆ ಹಿಂದಿನಿಂದ ಅಶೋಕ್ ಲೈಲಾಂಡ್ ಗಾಡಿ ಡಿಕ್ಕಿಯಾಗಿ ಇಬ್ಬರು ಕುರಿ ವ್ಯಾಪಾರಿಗಳು ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಹಿರಿಯೂರು ತಾಲ್ಲೂಕಿನ ಆರ್.ಕೆ.ಪವರ್ ಜಿನ್ ಬಳಿ ಸಂಭವಿಸಿದೆ.
ಚಳ್ಳಕೆರೆಯ ತಾಲೂಕಿನ ತನ್ನ ಗ್ರಾಮದಿಂದ ಹಿರಿಯೂರು ಕುರಿ ಸಂತೆಗೆ ಕುರಿ ವ್ಯಾಪಾರ ಮಾಡಲು ಅಶೋಕ್ ಲೈಲ್ಯಾಂಡ್ ಗಾಡಿಯಲ್ಲಿ ಕುರಿ ತುಂಬಿಕೊಂಡು ಬರುತ್ತಿರುವಾಗ ಮುಂದೆ ಚಲಿಸುತ್ತಿದ್ದ ಲಾರಿಗೆ ಅಶೋಕ್ ಲೈಲಾಂಡ್ ಗಾಡಿ ಡಿಕ್ಕಿಯಾಗಿದೆ. ಡಿಕ್ಕಿಯಾದ ರಭಸಕ್ಕೆ ಇಬ್ಬರು ಕುರಿ ವ್ಯಾಪಾರಿಗಳು ಸ್ಥಳದಲ್ಲೇ ಅಸುನೀಗಿದ್ದಾರೆ. ಮೃತರನ್ನು ಚಳ್ಳಕೆರೆ ತಾಲೂಕಿನ ಹುಲಿಕುಂಟೆ ಗ್ರಾಮದ ರಮೇಶ್(55) ಹಾಗೂ ಬೆಳೆಗೆರೆ ಶಿವಲಿಂಗಪ್ಪ (65) ಮೃತರು ಎಂದು ಗುರುತಿಸಲಾಗಿದೆ. ಇನ್ನು ಗಾಯಗೊಂಡವರನ್ನು ಸ್ಥಳೀಯ ಸರ್ಕಾರಿ ಸಾರ್ವಜನಿಕ ಆಸ್ಪತ್ರೆಗೆ ದಾಖಲಿಸಲಾಗಿದೆ. ಸ್ಥಳಕ್ಕೆ ಹಿರಿಯೂರು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Previous articleಜಾಣರ ಗುರು
Next articleATMSarkara ಕ್ಕೆ ಕ್ಲೀನ್ ಚಿಟ್ ಕೊಟ್ಟಕೊಳ್ಳುವ ವಿಫಲ ಪ್ರಯತ್ನ