ವಿದ್ಯಾನಗರದಲ್ಲಿ ಹೊತ್ತಿ ಉರಿದ ಕಾರು

0
18

ಹುಬ್ಬಳ್ಳಿ: ಚಲಿಸುತ್ತಿದ್ದ ಮಾರುತಿ ಸ್ವಿಫ್ಟ್ ಕಾರಿನಲ್ಲಿ ಹಠಾತ್ ಬೆಂಕಿ ಹೊತ್ತಿಕೊಂಡು ಧಗ ಧಗ ಉರಿದ ಘಟನೆ ಇಲ್ಲಿನ ವಿದ್ಯಾನಗರದ ಹು-ಧಾ ಮುಖ್ಯ ರಸ್ತೆ( ರಿಲಯನ್ಸ್ ಡಿಜಿಟಲ್ ಮುಂದೆ) ಶುಕ್ರವಾರ ಸಂಜೆ ಸಂಭವಿಸಿದೆ.
ಧಾರವಾಡಕ್ಕೆ ತೆರಳುತ್ತಿದ್ದ ಕಾರಿನಲ್ಲಿ ಏಕಾಏಕಿ ಬೆಂಕಿ ಕಾಣಿಸಿಕೊಂಡಿದ್ದು, ಚಾಲಕ ಪ್ರಾಣಾಪಾಯದಿಂದ ಪಾರಾಗಿದ್ದಾನೆ. ಅಗ್ನಿ ಶಾಮಕ ದಳದ ಸಿಬ್ಬಂದಿ ಸ್ಥಳಕ್ಕೆ ಧಾವಿಸಿ ಬೆಂಕಿ ನಂದಿಸಿದ್ದಾರೆ. ದಿನಪೂರ್ತಿ ಟ್ರಾಫಿಕ್‌ನಿಂದ ಕೂಡಿದ ರಸ್ತೆಯಲ್ಲಿಯೇ ಈ ಅಗ್ನಿ ಅವಘಡ ಸಂಭವಿಸಿದ್ದರಿಂದ ಈ ಮಾರ್ಗದಲ್ಲಿ ಹುಬಳ್ಳಿಯಿಂದ ಧಾರವಾಡ ಕಡೆಗೆ ಸಂಚರಿಸುವ ವಾಹನ ಸಂಚಾರ ಅಸ್ತವ್ಯಸ್ತವಾಯಿತು. ಏಕಾಏಕಿ ಬೆಂಕಿ ತಗುಲಿರುವ ಕಾರಣ ತಿಳಿದು ಬಂದಿಲ್ಲ. ವಿದ್ಯಾನಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ಉತ್ತರ ಸಂಚಾರ ಠಾಣೆ ಪೊಲೀಸರು ಸ್ಥಳಕ್ಕೆ ಆಗಮಿಸಿ ಟ್ರಾಫಿಕ್ ಸರಳಗೊಳಿಸಿದ್ದಾರೆ.

Previous articleಅಮಿತ್ ಶಾ ರೋಡ್ ಶೋ: ಮಧುವಣಗಿತ್ತಿಯಂತೆ ಶೃಂಗಾರಗೊಂಡ ಕುಂದಗೋಳ
Next articleಹುಬ್ಬಳ್ಳಿಗೆ ಆಗಮಿಸಿದ ಕೇಂದ್ರ ಗೃಹ ಸಚಿವ ಅಮಿತ್ ಶಾಗೆ ಮುಖ್ಯಮಂತ್ರಿ ಸ್ವಾಗತ