ಹುಬ್ಬಳ್ಳಿ: ತಾಲ್ಲೂಕಿನ ಕಿರೇಸೂರ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ನೂತನವಾಗಿ ನಿರ್ಮಾಣವಾಗುತ್ತಿರುವ ಕೊಠಡಿಯ ಗೊಡೆ ಶುಕ್ರವಾರ ಬೆಳಿಗ್ಗೆ ಕುಸಿದು ವಿದ್ಯಾರ್ಥಿಯೊಬ್ಬ ಮೃತಪಟ್ಟಿದ್ದಾನೆ. ಮತ್ತೊಬ್ಬ ವಿದ್ಯಾರ್ಥಿ ಗಾಯಗೊಂಡಿದ್ದು, ಕಿಮ್ಸ್’ಗೆ ದಾಖಲಿಸಲಾಗಿದೆ.
ಮೂರನೇ ತರಗತಿ ವಿದ್ಯಾರ್ಥಿ ವಿಸ್ತೃತ ಬೆಳಗಲಿ(9) ಮೃತಪಟ್ಟ ವಿದ್ಯಾರ್ಥಿ. ಏಳನೇ ತರಗತಿ ವಿದ್ಯಾರ್ಥಿ ಪ್ರಜ್ವಲ್ ನಾಗವಿ ಗಾಯಗೊಂಡವನು. ಬೆಳಿಗ್ಗೆ ಶಾಲೆಗೆ ಬಂದ ಮಕ್ಕಳು ನಿರ್ಮಾಣ ಹಂತದಲ್ಲಿರುವ ಶಾಲಾ ಕೊಠಡಿಯ ಬಳಿ ಆಟವಾಡುತ್ತಿದ್ದರು. ಏಕಾಏಕಿ ಗೋಡೆ ಕುಸಿದು ಮಕ್ಕಳ ಮೇಲೆ ಬಿದ್ದಿದೆ. ಬಾಲಕ ವಿಸ್ತ್ರತ ಸ್ಥಳದಲ್ಲಿಯೇ ಮೃತಪಟ್ಟಿದ್ದಾನೆ ಎಂದು ಸ್ಥಳೀಯರು ತಿಳಿಸಿದ್ದಾರೆ. ಬಾಲಕನ ಮೃತದೇಹ ಕಿಮ್ಸ್ ಶವಾಗಾರಕ್ಕೆ ರವಾನಿಸಲಾಗಿದೆ. ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ