ಚಿತ್ರದುರ್ಗ: ಶಾಸಕರ ಅಮಾನರು ಬೆದರಿಕೆ, ತಾಪಂ ಹಾಗೂ ಗ್ರಾಪಂ ಸದಸ್ಯರು ಕಿರುಕುಳದಿಂದ ಎಸ್‌ಡಿಎ ನೌಕರನೊಬ್ಬ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಚಿತ್ರದುರ್ಗ ಜಿಲ್ಲೆಯ ಹೊಳಲ್ಕೆರೆ ತಾಲೂಕಿನ ಉಪ್ಪರಿಗೇನಹಳ್ಳಿ ಗ್ರಾಮ ಪಂಚಾಯಿತಿ ಎಸ್‌ಡಿಎ ತಿಪ್ಪೇಸ್ವಾಮಿ ವಿಷಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಹೊಳಲ್ಕೆರೆ ಬಿಜೆಪಿ ಶಾಸಕ ಎಂ ಚಂದ್ರಪ್ಪ ಮತ್ತು ತಾಲೂಕು ಪಂಚಾಯಿತಿ ಹಾಗೂ ಗ್ರಾಮ ಪಂಚಾಯಿತಿ ಸದಸ್ಯರು ಕಿರುಕುಳದಿಂದ ಆತ್ಮಹತ್ಯೆ ಮಾಡಿಕೊಳ್ಳುತ್ತಿರುವುದಾಗಿ ಡೆತ್ನೋಟ್ನಲ್ಲಿ ಬರೆದಿಟ್ಟಿದ್ದಾರೆ.
ನಿನ್ನೆ(ಆಗಸ್ಟ್ 06) ಸಂಬಂಧಿಕರಿದ್ದ ಹೊಸದುರ್ಗ ತಾಲೂಕಿನ ಜಾನಕಲ್ ಗ್ರಾಮಕ್ಕೆ ತೆರಳಿದ್ದಾಗ ತಿಪ್ಪೇಸ್ವಾಮಿ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಈ ಕುರಿತಂತೆ ಮೃತ ತಿಪ್ಪೇಸ್ವಾಮಿ ಪುತ್ರಿ ಹೊಸದುರ್ಗ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ. ಆದರೆ ದೂರಿನಲ್ಲಿ ಶಾಸಕ ಎಂ.ಚಂದ್ರಪ್ಪ, ತಾ.ಪಂ ಇಓ ರವಿ ಹೆಸರು ಉಲ್ಲೇಖವಿಲ್ಲ. ಗ್ರಾಪಂ ಸದಸ್ಯರ ಕಿರುಕುಳ ಹಿನ್ನಲೆ ಆತ್ಮಹತ್ಯೆ ಎಂದು ದೂರು ನೀಡಿದ್ದು, ಮೋಹನ್, ಮೂರ್ತಿ, ಉಗ್ರಪ್ಪ, ಲವ, ರಾಜಪ್ಪ ಎಂಬುವರ ಕಿರುಕುಳ ಎಂದು ದೂರು ನೀಡಿದ್ದಾರೆ.