ಶಾಸಕ ರೇಣುಕಾಚಾರ್ಯ ಸಹೋದರನ ಮಗ ಶವವಾಗಿ ಪತ್ತೆ

0
18

ದಾವಣಗೆರೆ: ಹೊನ್ನಾಳಿ ಶಾಸಕ ಎಂ.ಪಿ ರೇಣುಕಾಚಾರ್ಯ ಸಹೋದರನ ಮಗ ಚಂದ್ರಶೇಖರ್​ ಅವರ ಮೃತದೇಹ ಕಾರಿನಲ್ಲೇ ಕೊಳೆತ ಸ್ಥಿತಿಯಲ್ಲಿ ಪತ್ತೆಯಾಗಿದೆ.
ಹೊನ್ನಾಳಿ ಬಳಿ ತುಂಗಭದ್ರಾ ಚಾನಲ್​ನಲ್ಲಿ ಚಂದ್ರಶೇಖರ್​ ಅವರ ಕಾರು ಪತ್ತೆಯಾಗಿದೆ. ಹೊನ್ನಾಳಿ ಹಾಗೂ ನ್ಯಾಮತಿ ಮಾರ್ಗಮಧ್ಯೆ ಇರುವ ತುಂಗಭದ್ರಾ ಕಾಲುವೆಯಲ್ಲಿ ಅಗ್ನಿಶಾಮಕ ಸಿಬ್ಬಂದಿ ಕಾರ್ಯಾಚರಣೆ ನಡೆಸಿ ಕಾರನ್ನು ಮೇಲಕ್ಕೆ ಎತ್ತಿದ್ದಾರೆ. ಒಳಭಾಗದಲ್ಲಿ ಮೃತದೇಹ ಪತ್ತೆಯಾಗಿದೆ. ಸ್ಥಳಕ್ಕೆ ಶಾಸಕ ರೇಣುಕಾಚಾರ್ಯ ಹಾಗೂ ಕುಟುಂಬಸ್ಥರು ದೌಡಾಯಿಸಿದ್ದು, ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ.

Previous articleಪಾಕ್‌ ಮಾಜಿ ಪ್ರಧಾನಿಗೆ ಗುಂಡೇಟು
Next articleಕೋಡಿಹಳ್ಳಿ ವಿರುದ್ಧ ಕಪ್ಪುಪಟ್ಟಿ ಪ್ರದರ್ಶಿಸಿದ ರೈತರು