Home ಅಪರಾಧ ಸುರತ್ಕಲ್ ವ್ಯಾಪ್ತಿಯಲ್ಲಿ ಲಘು ಅಪಘಾತ: ಮಾತಿನ ಚಕಮಕಿ

ಸುರತ್ಕಲ್ ವ್ಯಾಪ್ತಿಯಲ್ಲಿ ಲಘು ಅಪಘಾತ: ಮಾತಿನ ಚಕಮಕಿ

0

ಮಂಗಳೂರು: ಸುರತ್ಕಲ್ ಠಾಣಾ ವ್ಯಾಪ್ತಿಯ ಗಣೇಶ್ ಪುರ ಎಂಬಲ್ಲಿ ಬುಧವಾರ ರಾತ್ರಿ ಬೈಕ್- ಕಾರ್ ನಡುವೆ ಲಘು ಅಪಘಾತ ಸಂಭವಿಸಿದ್ದು, ಕೆಲ ಕಾಲ ಘಟನಾ ಸ್ಥಳದಲ್ಲಿ ಉದ್ವಿಗ್ನ ವಾತಾವರಣ ಸೃಷ್ಟಿಯಾಗಿತ್ತು.
ಇತ್ತೀಚೆಗೆ ಹತ್ಯೆಯಾಗಿದ್ದ ಫಾಝಿಲ್ ಸಹೋದರ ಸಂಚರಿಸುತ್ತಿದ್ದ ವಾಹನ ಮತ್ತು ಇನ್ನೊಂದು ವಾಹನ ಪರಸ್ಪರ ಒರೆಸಿಕೊಂಡು ಹೋದಾಗ ಇತ್ತಂಡಗಳ ನಡುವೆ ಮಾತಿನ ಚಕಮಕಿ ಉಂಟಾಗಿತ್ತು. ಪೊಲೀಸರು ಮತ್ತು ಸಾರ್ವಜನಿಕರ ಮಧ್ಯ ಪ್ರವೇಶದಿಂದ ಪರಿಸ್ಥಿತಿ ತಿಳಿಯಾಗಿದೆ ಎಂದು ತಿಳಿದುಬಂದಿದೆ.
ಸ್ಥಳದಲ್ಲಿ ಪೊಲೀಸ್ ಬಂದೋಬಸ್ತ್ ಏರ್ಪಡಿಸಲಾಗಿದೆ.

Exit mobile version