ಮಂಗಳೂರು: ನಗರದಲ್ಲಿ ನಡೆದಿದ್ದ ಹನಿಟ್ರ್ಯಾಪ್ ಪ್ರಕರಣವೊಂದು ತಡವಾಗಿ ಬೆಳಕಿಗೆ ಬಂದಿದೆ. ನಗರದ ಮೂಡುಶೆಟ್ಟೆ ರೆಸಾರ್ಟ್‌ನಲ್ಲಿ ಫೆಬ್ರವರಿ ತಿಂಗಳಿನಲ್ಲಿ ನಡೆದಿದ್ದ ಹನಿಟ್ರ್ಯಾಪ್ ಪ್ರಕರಣ ಈಗ ಬಯಲಾಗಿದೆ.
ಯುವತಿಯೊಬ್ಬಳನ್ನು ಮುಂದಿಟ್ಟುಕೊಂಡು, ರೇಸಾರ್ಟ್‌ನಲ್ಲಿ ಕೇರಳ ಮೂಲದ ಇಬ್ಬರು ವ್ಯಕ್ತಿಗಳ ವಿಡಿಯೋವನ್ನು 7 ಮಂದಿ ಚಿತ್ರೀಕರಿಸಿದ್ದಾರೆ. ಬಳಿಕ ಈ ಆರೋಪಿಗಳು ಕೇರಳ ಮೂಲದ ಯುವಕರಿಂದ ಸುಮಾರು 10 ಲಕ್ಷ ರೂ. ವಸೂಲಿ ಮಾಡಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ಯುವತಿ ಸೇರಿ 7 ಮಂದಿಯನ್ನು ಬಂಧಿಸಲಾಗಿದೆ ಎಂದು ಮಂಗಳೂರಿನಲ್ಲಿ ಕಮಿಷನರ್ ಕುಲದೀಪ್ ಕುಮಾರ್ ಜೈನ್ ತಿಳಿಸಿದ್ದಾರೆ.