ಹಾಸ್ಟೆಲ್‌ನಲ್ಲಿ ನೇಣಿಗೆ ಶರಣಾದ ವಿದ್ಯಾರ್ಥಿ

0
12
ಆತ್ಮಹತ್ಯೆ

ಕಲಬುರಗಿ: ವಿದ್ಯಾರ್ಥಿಯೊಬ್ಬ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಜೇವರ್ಗಿಯ ಬಿಸಿಎಂ ಹಾಸ್ಟೆಲ್‌ನಲ್ಲಿ ನಡೆದಿದೆ.
ಸಿದ್ದುಪ್ರಸಾದ್ ಶಹಾಪುರ(23) ಎಂಬಾತನೇ ಆತ್ಮಹತ್ಯೆಗೆ ಶರಣಾದ ವಿದ್ಯಾರ್ಥಿ ಎಂದು ಗುರುತಿಸಲಾಗಿದೆ. ಎರಡು ವರ್ಷಗಳ ಹಿಂದೆಯೇ ಬಿ.ಕಾಂ ಮುಗಿಸಿದ್ದ ಈತ ಆರ್ಥಿಕ ಸಮಸ್ಯೆಯಿಂದಾಗಿ ಹಾಸ್ಟೆಲ್‌ನಲ್ಲಿಯೇ ಇರುತ್ತಿದ್ದ. ಅಲ್ಲಲ್ಲಿ ಒಂದಿಷ್ಟು ಸಾಲವನ್ನು ಮಾಡಿಕೊಂಡಿದ್ದ ಎಂದು ಹೇಳಲಾಗಿದೆ. ಆದರೆ, ಆತ್ಮಹತ್ಯೆಗೆ ಕಾರಣ ಏನೆಂದು ತಿಳಿದುಬಂದಿಲ್ಲ. ಈ ಕುರಿತಂತೆ ಜೇವರ್ಗಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Previous articleವರ್ತಕನ ಮೇಲೆ ಗುಂಡಿನ ದಾಳಿ
Next articleನಾಳೆ ರಾಜ್ಯಕ್ಕೆ ರಾಹುಲ್ ಗಾಂಧಿ