ಹೊತ್ತಿ ಉರಿದ ಶಾಲಾ ಬಸ್‌

0
29
ಬಸ್‌

ಬಳ್ಳಾರಿ: ಚಲಿಸುತ್ತಿದ್ದ ಖಾಸಗಿ ಶಾಲಾ ಬಸ್‌ಗೆ ಆಕಸ್ಮಿಕವಾಗಿ ಬೆಂಕಿ ಹೊತ್ತಿಕೊಂಡಿದ್ದು, ಬಸ್‌ನಲ್ಲಿದ್ದ 30ಕ್ಕೂ ಅಧಿಕ ಮಕ್ಕಳು ಪ್ರಾಣಾಪಾಯದಿಂದ ಪಾರಾದ ಘಟನೆ ಬಳ್ಳಾರಿ ಜಿಲ್ಲೆಯ ಸಿರುಗುಪ್ಪದಲ್ಲಿ ನಡೆದಿದೆ.
ಸಿರುಗುಪ್ಪದ ವಿಶ್ವಜ್ಯೋತಿ ಶಿಕ್ಷಣ ಸಂಸ್ಥೆಗೆ ಸೇರಿದ ಶಾಲಾ ಬಸ್‌ನಲ್ಲಿ ಈ ಅವಘಡ ಸಂಭವಿಸಿದ್ದು, ಬಸ್ ಸಿರಗುಪ್ಪ-ತೆಕ್ಕಲಕೋಟೆ ಮಾರ್ಗವಾಗಿ ಬರುತ್ತಿದ್ದ ವೇಳೆ ಇದ್ದಕ್ಕಿದ್ದಂತೆ ಡಿಸೇಲ್ ಇಂಜಿನ್‌ನಲ್ಲಿ ಹೊಗೆ ಕಾಣಿಸಿಕೊಂಡಿದೆ. ವಿದ್ಯಾರ್ಥಿಗಳು ಇದನ್ನು ಗಮನಿಸಿ, ಡ್ರೈವರ್‌ಗೆ ತಿಳಿಸಿದ್ದಾರೆ. ತಕ್ಷಣ ರಸ್ತೆ ಬದಿಯಲ್ಲಿ ಬಸ್ ನಿಲ್ಲಿಸಿದ ಚಾಲಕ, ಎಲ್ಲ ಮಕ್ಕಳನ್ನು ಬಸ್‌ನಿಂದ ಕೆಳಗೆ ಇಳಿಸಿದ್ದಾರೆ. ಮಕ್ಕಳು ಕೆಳಗೆ ಇಳಿಯುತ್ತಿದ್ದಂತೆ ಬಸ್‌ ಹೊತ್ತಿ ಉರಿದಿದೆ. ತಕ್ಷಣವೇ ಸ್ಥಳಕ್ಕೆ ಧಾವಿಸಿದ ಅಗ್ನಿಶಾಮಕ ಸಿಬ್ಬಂದಿ, ಬೆಂಕಿ ನಂದಿಸಿದ್ದಾರೆ. ಈ ಕುರಿತು ಸಿರಗುಪ್ಪ ಠಾಣೆಯ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Previous articleವಾಹನ ಸೇರಿ 40 ಲಕ್ಷ ಮೌಲ್ಯದ ಮದ್ಯ ವಶಕ್ಕೆ
Next articleಜೇನು ಎಬ್ಬಿಸಿ ಎಲ್ಲರಿಗೂ ಕಡಿಯಲು ಹಚ್ಚಿದ್ದಾರೆ