Home ಅಪರಾಧ ೨೮ ವರ್ಷಗಳಿಂದ ತಲೆ ಮರೆಸಿಕೊಂಡಿದ್ದ ಆರೋಪಿ ಬಂಧನ

೨೮ ವರ್ಷಗಳಿಂದ ತಲೆ ಮರೆಸಿಕೊಂಡಿದ್ದ ಆರೋಪಿ ಬಂಧನ

0

ಮುಂಡಗೋಡ: ಕರ್ನಾಟಕ, ಮಹಾರಾಷ್ಟ್ರ ರಾಜ್ಯಗಳ ಹಲವು ಕಡೆ ವಂಚನೆಯ ಹಳೆಯ ಪ್ರಕರಣಗಳಲ್ಲಿ ಸುಮಾರು ೨೮ ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಇಲ್ಲಿನ ಪೊಲೀಸರು ಬಂಧಿಸಿ ಶನಿವಾರ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ.
ಬೆಳಗಾವಿ ಜಿಲ್ಲೆಯ ಬೈಲಹೊಂಗಲ ತಾಲೂಕಿನ ದೇವಲಾಪುರ ಗ್ರಾಮದ ಮಲ್ಲನಗೌಡ ಕರಬಸನಗೌಡ ಪಾಟೀಲ(೬೩) ಬಂಧಿತ ಆರೋಪಿ. ೧೯೯೫ನೇ ಸಾಲಿನಲ್ಲಿ ದಾಖಲಾದ ವಂಚನೆ ಪ್ರಕರಣಗಳಲ್ಲಿ ನ್ಯಾಯಾಲಯಕ್ಕೆ ಹಾಜರಾಗದೆ ತಲೆ ಮರೆಸಿಕೊಂಡಿದ್ದನು. ೨೮ ವರ್ಷಗಳಿಂದ ಬೇಕಾಗಿದ್ದ ಆರೋಪಿಯನ್ನು ಇಲ್ಲಿನ ಪೊಲೀಸ್ ಠಾಣೆಯ ಸಿಪಿಐ ಬಿ.ಎಸ್. ಲೋಕಾಪುರ ನೇತೃತ್ವದ ತಂಡವು ಮಲ್ಲನಗೌಡನನ್ನು ಹುಬ್ಬಳ್ಳಿಯಲ್ಲಿ ಪತ್ತೆ ಮಾಡಿ ನ್ಯಾಯಾಲಯಕ್ಕೆ ಹಾಜರುಪಡಿಸುವಲ್ಲಿ ಯಶಸ್ವಿಯಾಗಿದ್ದಾರೆ.

Exit mobile version