Home ಅಪರಾಧ 14 ದಿನಗಳ ನ್ಯಾಯಾಂಗ ಬಂಧನಕ್ಕೆ ನಟ ಚೇತನ್

14 ದಿನಗಳ ನ್ಯಾಯಾಂಗ ಬಂಧನಕ್ಕೆ ನಟ ಚೇತನ್

0

ನಟ ಚೇತನ್ ಅವರಿಗೆ ಬೆಂಗಳೂರಿನ 32ನೇ ಎಸಿಎಂಎಂ ಕೋರ್ಟ್ 14 ದಿನಗಳ ನ್ಯಾಯಾಂಗ ಬಂಧನ ವಿಧಿಸಿ ತೀರ್ಪು ಪ್ರಕಟಿಸಿದೆ. ನಟ ಚೇತನ್ ಉರಿಗೌಡ-ನಂಜೇಗೌಡ ಸಿನಿಮಾ ವಿಚಾರ ಕುರಿತು ಕೆಟ್ಟದಾಗಿ ಪೋಸ್ಟ್ ಮಾಡಿದ್ದರು.
ಹಿಂದುತ್ವವನ್ನು ಸುಳ್ಳಿನ ಆಧಾರದ ಮೇಲೆ ಕಟ್ಟಲಾಗಿದೆ ಎಂದು ಟ್ವೀಟ್ ಮಾಡಿದ ಹಿನ್ನೆಲೆಯಲ್ಲಿ ಇಂದು ಬೆಳಗ್ಗೆ ಬೆಂಗಳೂರಿನ ಶೇಷಾದ್ರಿಪುರಂ ಠಾಣೆ ಪೊಲೀಸರು ನಟ ಚೇತನ್ ಅವರನ್ನು ಅರೆಸ್ಟ್ ಮಾಡಿದ್ದರು.ಚೇತನ್ ಪೋಸ್ಟ್ ವಿರುದ್ಧ ಹಿಂದೂಪರ ಸಂಘಟನೆ ಹಾಗೂ ಶಿವಕುಮಾರ್ ಎಂಬುವರು ವಿರುದ್ಧ ಪ್ರಕರಣ ದಾಖಲಿಸಿದ್ದರು. ಈ ದೂರಿನ ಅನ್ವಯ ಐಪಿಸಿ ಸೆಕ್ಷನ್ 295(ಎ), 505(ಬಿ) ಅಡಿಯಲ್ಲಿ ಎಫ್ಐಆರ್ ದಾಖಲಿಸಲಾಗಿತ್ತು. ಬಳಿಕ, ನಟ ಚೇತನ್ ಅವರನ್ನು ಪೊಲೀಸರು ನ್ಯಾಯಾಲಯಕ್ಕೆ ಹಾಜರುಪಡಿಸಿದ್ದರು.

Exit mobile version