Home ನಮ್ಮ ಜಿಲ್ಲೆ ʻನಾನು ಎಲ್ಲೂ ಹೋಗಲ್ಲ….!ʼ: ದೇವೇಗೌಡರೆದುರು ಕಣ್ಣೀರು ಹಾಕಿದ ಜಿಟಿಡಿ

ʻನಾನು ಎಲ್ಲೂ ಹೋಗಲ್ಲ….!ʼ: ದೇವೇಗೌಡರೆದುರು ಕಣ್ಣೀರು ಹಾಕಿದ ಜಿಟಿಡಿ

0

ಮೈಸೂರು: ನಾನು ಜೆಡಿಎಸ್‌ ಪಕ್ಷವನ್ನು ಬಿಟ್ಟು ಎಲ್ಲೂ ಹೋಗಲ್ಲ ಎಂದು ಶಾಸಕ ಜಿ.ಟಿ. ದೇವೇಗೌಡ ಇಂದು ಕಣ್ಣೀರು ಹಾಕಿದ್ದಾರೆ.
ಜೆಡಿಎಸ್‌ ವರಿಷ್ಠ ಹೆಚ್‌.ಡಿ. ದೇವೇಗೌಡರು ಇಂದು ಜಿಟಿಡಿ ಅವರ ನಿವಾಸಕ್ಕೆ ಭೇಟಿ ನೀಡಿದ ಸಂದರ್ಭದಲ್ಲಿ ಮಾತನಾಡಿದ ಅವರು, ನಾನು ಯಾವುದೇ ಕಾರಣಕ್ಕೂ ಬೇರೆ ಪಕ್ಷಗಳಿಗೆ ಹೋಗುವುದಿಲ್ಲ. ಜೆಡಿಎಸ್‌ನಲ್ಲೇ ಉಳಿಯುತ್ತೇನೆ, ಈ ಪಕ್ಷಕ್ಕೆ ಯಾವುದೇ ಕಳಂಕ ತರದ ರೀತಿಯಲ್ಲಿ ನಡೆದುಕೊಳ್ಳುತ್ತೇನೆ ಎಂದು ಕಣ್ಣೀರು ಹಾಕಿದರು.
ಹೆಚ್.ಡಿ. ದೇವೇಗೌಡ ಅವರೊಂದಿಗೆ ಮಾಜಿ ಸಿಎಂ ಹೆಚ್.ಡಿ. ಕುಮಾರಸ್ವಾಮಿ, ರಾಜ್ಯಾಧ್ಯಕ್ಷ ಸಿಎಂ ಇಬ್ರಾಹಿಂ ಹಾಗೂ ಇತರ ಮುಖಂಡರುಗಳು ಜಿಟಿಡಿ ಅವರ ನಿವಾಸಕ್ಕೆ ಭೇಟಿ ನೀಡಿದರು.

Exit mobile version