ಮುಖ್ಯ ಮಂತ್ರಿ ಸಿದ್ದರಾಮಯ್ಯ : ಜಾತಿ, ಧರ್ಮ, ಪಂಥ, ಸಿದ್ಧಾಂತಗಳನ್ನು ತಳುಕುಹಾಕದೆ ಮಾನಸಿಕ ಮತ್ತು ದೈಹಿಕ ಆರೋಗ್ಯಕ್ಕಾಗಿ ಯೋಗಾಭ್ಯಾಸ ಮಾಡೋಣ. ಸರ್ವರಿಗೂ ಅಂತಾರಾಷ್ಟ್ರೀಯ ಯೋಗದ ದಿನದ ಶುಭಾಶಯಗಳು ಎಂದಿದ್ದಾರೆ.
ಮಾಜಿ ಸಚಿವ ಆರ್.ಅಶೋಕ್: ಯೋಗ” ಎನ್ನುವುದು ಭಾರತವು ಜಗತ್ತಿಗೆ ನೀಡಿದ ಬಹುದೊಡ್ಡ ಕೊಡುಗೆಯಾಗಿದೆ. ಯೋಗ ಶಾಸ್ತ್ರದ ಪಿತಾಮಹರಾದ ಪತಂಜಲಿ ಮಹರ್ಷಿಗಳಿಗೆ ನನ್ನ ಗೌರವಪೂರ್ಣ ನಮನಗಳು. ತಮಗೆಲ್ಲರಿಗೂ ಅಂತರಾಷ್ಟ್ರೀಯ ಯೋಗ ದಿನಾಚರಣೆಯ ಶುಭಾಶಯಗಳು.
ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ : ಜಗತ್ತಿಗೆ ಭಾರತದ ಕೊಡುಗೆಯಾಗಿರುವ ಯೋಗ ಕೇವಲ ವ್ಯಾಯಾಮ ಮಾತ್ರವಲ್ಲ, ಇದು ವ್ಯಕ್ತಿಗತ ಸಂಪೂರ್ಣ ಆರೋಗ್ಯ ಮತ್ತು ಪರಿಪೂರ್ಣ ಸಾಮರ್ಥ್ಯವನ್ನು ಕಂಡುಕೊಳ್ಳುವ ವಿಧಾನವೂ ಹೌದು. ಜೊತೆಗೆ ಸಾಮಾಜಿಕವಾಗಿ ಶಾಂತಿ, ಸಾಮರಸ್ಯವನ್ನು ಸಾಕಾರಗೊಳಿಸುವ ಯೋಗ ನಮ್ಮ ಬದುಕಿನ ಅವಿಭಾಜ್ಯ ಅಂಗವಾಗಲಿ, ಎಲ್ಲರಿಗೂ ಯೋಗ ದಿನದ ಶುಭಾಶಯಗಳು.
ಭಾರೀ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂ ಬಿ ಪಾಟೀಲ್ : ಸ್ವಸ್ಥ, ಸುಂದರ ಸಮಾಜ ನಿರ್ಮಾಣಕ್ಕಾಗಿ ನಮ್ಮ ಹಿರಿಯರು ಯೋಗ ಎಂಬ ಮಹಾನ್ ಶಕ್ತಿಯನ್ನು ಜಗತ್ತಿಗೆ ನೀಡಿದ್ದಾರೆ. ಪ್ರಾಚೀನ ವೈದ್ಯಕೀಯ ಪದ್ಧತಿಯಲ್ಲಿ ಯೋಗಕ್ಕೆ ವಿಶೇಷ ಸ್ಥಾನವಿದೆ. ಸ್ಪರ್ಧಾತ್ಮಕ ಜಗತ್ತಿನಲ್ಲಿ ಒತ್ತಡಗಳಿಂದ ಮುಕ್ತರಾಗಲು ಮಕ್ಕಳ ಆದಿಯಾಗಿ ಎಲ್ಲರಿಗೂ ಯೋಗ ಸಹಕಾರಿಯಾಗಿದೆ.
ಮಹಿಳೆ ಮತ್ತು ಕಲ್ಯಾಣ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್: ದೈಹಿಕ, ಮಾನಸಿಕ ಭಾವನಾತ್ಮಕ ಹಾಗೂ ಆಧ್ಯಾತ್ಮಿಕ ಉನ್ನತಿಗಾಗಿ ಯೋಗ ಸಹಕಾರಿ. ಜೀವನದಲ್ಲಿ ಯೋಗ ಅಭ್ಯಾಸವನ್ನು ಅಳವಡಿಸಿಕೊಳ್ಳುವ ಮುಖೇನ ಒಳ್ಳೆಯ ಆರೋಗ್ಯ ಭಾಗ್ಯವನ್ನು ಪಡೆಯೋಣ. ಸರ್ವರಿಗೂ ಅಂತರರಾಷ್ಟ್ರೀಯ ಯೋಗ ದಿನದ ಹಾರ್ದಿಕ ಶುಭಾಶಯಗಳು.