Home ಅಪರಾಧ ಅಕ್ರಮ ಮದ್ಯಕ್ಕೆ ಟ್ರಾನ್ಸ್‌ಫಾರ್ಮರ್‌ ಮಾದರಿ

ಅಕ್ರಮ ಮದ್ಯಕ್ಕೆ ಟ್ರಾನ್ಸ್‌ಫಾರ್ಮರ್‌ ಮಾದರಿ

0

ಬೆಳಗಾವಿ: ಅಕ್ರಮವಾಗಿ ಅತ್ಯಾಧುನಿಕ ತಂತ್ರಜ್ಞಾನ ಬಳಸಿ ಸಾಗಿಸುತ್ತಿದ್ದ ೧೦ ಲಕ್ಷ ಮೌಲ್ಯದ ಮದ್ಯವನ್ನು ಅಬಕಾರಿ ಅಧಿಕಾರಿಗಳು ಮಂಗಳವಾರ ವಶಪಡಿಸಿಕೊಂಡಿದ್ದಾರೆ.
ಬೆಳಗಾವಿ ತಾಲ್ಲೂಕಿನ ಹಿರೇಬಾಗೇವಾಡಿ ಟೋಲ್ ಗೆಟ್ ಬಳಿ ಅಬಕಾರಿ ಅಧಿಕಾರಿಗಳು ತಪಾಸಣೆ ನಡೆಸಿ ವಶ ಪಡಿಸಿಕೊಂಡಿದ್ದಾರೆ. ಗೋವಾದಿಂದ ತೆಲಂಗಾಣಕ್ಕೆ ಸಾಗಿಸುತ್ತಿದ್ದ ಈ ಅಕ್ರಮ ಮದ್ಯಕ್ಕೆ ಟ್ರಾನ್ಸ್‌ಫಾರ್ಮರ್ ಮಾದರಿಯಲ್ಲಿ ಸಿದ್ಧಪಡಿಸಿದ ಬಾಕ್ಸ್‌ಗಳಲ್ಲಿ ಅಕ್ರಮವಾಗಿ ಸಾಗಿಸುತ್ತಿದ್ದ ₹10 ಲಕ್ಷ ಮೌಲ್ಯದ ಗೋವಾ ಮದ್ಯವನ್ನು ಅಬಕಾರಿ ಅಧಿಕಾರಿಗಳು ಮಂಗಳವಾರ ವಶಪಡಿಸಿಕೊಂಡಿದ್ದಾರೆ. ಕೆಲವು ದಿನಗಳ ಹಿಂದೆ ಫ್ಲೈವುಡ್ ಜೋಡಿಸಿ ಅದರ ಮಧ್ಯದಲ್ಲಿ ಮದ್ಯದ ಬಾಟಲಿಗಳನ್ನು ಇಟ್ಟು ಸಾಗಿಸುತ್ತಿದ್ದನ್ನು ವಶಕ್ಕೆ ಪಡೆದಿದ್ದರು.

Exit mobile version