ಅಧ್ಯಕ್ಷರ ಮನೆ ಮೇಲೆ ಇಡಿ ದಾಳಿ

0
14

ಶಿವಮೊಗ್ಗ: ತೀರ್ಥಹಳ್ಳಿಯಲ್ಲಿ ಬೆಳ್ಳಂಬೆಳಗ್ಗೆಯೇ ಇಡಿ ದಾಳಿ ಮಾಡಿದೆ. ಜಿಲ್ಲೆಯ ಪ್ರಭಾವಿ ಕಾಂಗ್ರೆಸ್ ಮುಖಂಡ ಹಾಗೂ ಡಿಸಿಸಿ ಬ್ಯಾಂಕ್ ಅಧ್ಯಕ್ಷ ಆರ್.ಎಂ.ಮಂಜುನಾಥಗೌಡ ನಿವಾಸದ ಮೇಲೆ ಇಡಿ ದಾಳಿ ನಡೆದಿದೆ. ಶರಾವತಿ ನಗರದ ನಿವಾಸ ಹಾಗೂ ತೀರ್ಥಹಳ್ಳಿಯ ಬೆಟ್ಟಮಕ್ಕಿಯಲ್ಲಿರುವ ಮಂಜುನಾಥಗೌಡ ಮನೆ ಮೇಲೂ ದಾಳಿ ಮಾಡಿದ್ದಾರೆ. ಪಟ್ಟಣದ ಬೆಟ್ಟಮಕ್ಕಿಯ ನಿವಾಸದ ಮೇಲೆ ಬೆಳ್ಳಂಬೆಳಗ್ಗೆ ದಾಳಿ ನಡೆಸಿರುವ ಅಕಾರಿಗಳು ಪರಿಶೀಲನೆ ನಡೆಸುತ್ತಿದ್ದಾರೆ. ಆರ್.ಎಂ. ಮಂಜುನಾಥ್ ಗೌಡರು ಬೆಂಗಳೂರಿನಲ್ಲಿದ್ದಾರೆ ಎಂದು ತಿಳಿದು ಬಂದಿದೆ. ಅಪೆಕ್ಸ್ ಬ್ಯಾಂಕ್ ಮಾಜಿ ಅಧ್ಯಕ್ಷರಾಗಿರುವ ಆರ್.ಎಂ.ಎಂ. ಅವರ ಮೂರು ನಿವಾಸಗಳ ಮನೆಗಳ ಮೇಲೆ ಇಡಿ ದಾಳಿ ಮಾಡಿದ್ದು, ತೀರ್ಥಹಳ್ಳಿ ಪಟ್ಟಣದ ಬೆಟ್ಟಮಕ್ಕಿಯಲ್ಲಿರುವ ನಿವಾಸ, ತೀರ್ಥಹಳ್ಳಿಯ ಕಲ್ಲುಕೊಪ್ಪ ನಿವಾಸದ ಮೇಲೆ ಹಾಗೂ ಶಿವಮೊಗ್ಗದ ಶರಾವತಿ ನಗರದಲ್ಲಿರುವ ನಿವಾಸದ ಮೇಲೂ ದಾಳಿ ಮಾಡಿದ್ದರೆನ್ನಲಾಗಿದೆ. ಮನೆ ಸುತ್ತಮುತ್ತ ಶಸ್ತ್ರಾಸ್ತ್ರ ಪೊಲೀಸರು ಸುತ್ತುವರೆದಿದ್ದರು. ಸರ್ಕಾರಿ ಕಾರುಗಳಲ್ಲಿ ಬಂದಿದ್ದ ಅಧಿಕಾರಿಗಳ ತಂಡ ಆರ್.ಎಂ.ಎಂ. ನಿವಾಸಗಳಲ್ಲಿ ಮಹತ್ವದ ದಾಖಲೆಗಳ ಪರಿಶೀಲನೆ ನಡೆಸಿದ್ದಾರೆ ಎಂದು ತಿಳಿದು ಬಂದಿದೆ.

Previous articleಸಾಲು ಮರದ ತಿಮ್ಮಕ್ಕ ಆರೋಗ್ಯದಲ್ಲಿ ಸ್ಥಿರ
Next articleಖೋ ಖೋ : ಸಬ್ ಜೂನಿಯರ್ ಕರ್ನಾಟಕ ತಂಡ ತಮಿಳುನಾಡಿಗೆ ಪ್ರಯಾಣ