ಅನುದಾನ ಸದ್ಬಳಕೆ ಮಾಡಿಕೊಳ್ಳಿ ಅಧಿಕಾರಿಗಳಿಗೆ ಸಚಿವ ಸಂತೋಷ ಲಾಡ್ ತರಾಟೆ

ಧಾರವಾಡ : ಸರ್ಕಾರದ ಯೋಜನೆಗಳನ್ನು ಜನಸಾಮಾನ್ಯರಿಗೆ ತಲುಪಿಸುವ ನಿಟ್ಟಿನಲ್ಲಿ ಪ್ರತಿಯೊಬ್ಬ ಅಧಿಕಾರಿಗಳು ಪ್ರಯತ್ನಿಸಿ, ಸರ್ಕಾರದ ಅನುದಾನ ಸದ್ಬಳಕೆ ಮಾಡಿಕೊಳ್ಳಬೇಕು ಎಂದು ಕಾರ್ಮಿಕ ಸಚಿವ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ ಲಾಡ್ ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡರು.

ಧಾರವಾಡ ಜಿಲ್ಲಾ ಪಂಚಾಯತ ಸಭಾಂಗಣದಲ್ಲಿ ಸೆಪ್ಟೆಂಬರ್ 2023 ಅತ್ಯಂಕ್ಕೆ ಕೊನೆಗೊಂಡ 2ನೇ ತ್ರೈಮಾಸಿಕ ಕೆಡಿಪಿ ಪ್ರಗತಿ ಪರಿಶೀಲನಾ ಸಭೆ ನಡೆಸಿದ, ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ ಲಾಡ ಸರಿಯಾಗಿ ಮಾಹಿತಿ ನೀಡಿದ ಅಧಿಕಾರಿಗಳಿಗೆ ಚಳಿ ಬಿಡಿಸಿದರು.

ಸಭೆಯಲ್ಲಿ ವಿಪ ಸದಸ್ಯ ಸಲೀಂ ಅಹ್ಮದ್, ನವಲಗುಂದ ಶಾಸಕ ಎನ್ ಎಚ್ ಕೋನರೆಡ್ಡಿ, ಹುಬ್ಬಳ್ಳಿ ಶಾಸಕ ಮಹೇಶ ಟೆಂಗಿನಕಾಯಿ, ಕುಂದಗೋಳ ಶಾಸಕ ಎಂ.ಆರ್ ಪಾಟೀಲ ಭಾಗವಹಿಸಿದ್ದರು.

ಧಾರವಾಡ ಜಿಲ್ಲಾಧಿಕಾರಿ ಗುರುದತ್ತ ಹೆಗಡೆ, ಜಿಲ್ಲಾ ಪಂಚಾಯತ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಸ್ವರೂಪ ಟಿ.ಕೆ., ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಗೋಪಾಲ ಬ್ಯಾಕೋಡ್ ಸಭೆಯಲ್ಲಿ ಇದ್ದರು.