Home ನಮ್ಮ ಜಿಲ್ಲೆ ಧಾರವಾಡ ಅಪರಾಧ ಪತ್ತೆಗೆ ತಂತ್ರಜ್ಞಾನ ಬಳಕೆಗೆ ಆದ್ಯತೆ

ಅಪರಾಧ ಪತ್ತೆಗೆ ತಂತ್ರಜ್ಞಾನ ಬಳಕೆಗೆ ಆದ್ಯತೆ

0

ಧಾರವಾಡ: ಅವಳಿನಗರದಲ್ಲಿ ನೂತನ ತಂತ್ರಜ್ಞಾನ ಬಳಕೆ ಮಾಡಿಕೊಂಡು ಅಪರಾಧ ಚಟುವಟಿಕೆಗಳನ್ನು ನಿಯಂತ್ರಿಸಲು ಕ್ರಮ ಕೈಗೊಳ್ಳಲಾಗುವುದು ಎಂದು ಹುಬ್ಬಳ್ಳಿ-ಧಾರವಾಡ ನೂತನ ಪೊಲೀಸ್ ಆಯುಕ್ತ ರಮಣ ಗುಪ್ತಾ ಹೇಳಿದರು.
ಅವರು ನವನಗರದ ಪೊಲೀಸ್ ಆಯುಕ್ತರ ಕಚೇರಿಯಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿ, ಫಿಂಗರ್‌ಪ್ರಿಂಟ್ ಸ್ಕ್ಯಾನರ್, ಮೊಬೈಲ್ ಸ್ಕ್ಯಾನರ್, ಸಿಸಿ ಟಿವಿ ವಿಡಿಯೋ ಅನಾಲಿಟಿಕ್ಸ್ ಸೇರಿದಂತೆ ನೂತನ ತಂತ್ರಜ್ಞಾನ ಬಳಕೆ ಮಾಡಿಕೊಂಡು ವೈಜ್ಞಾನಿಕ ರೀತಿಯಲ್ಲಿ ಅಪರಾಧ ಪತ್ತೆಗೆ ಆದ್ಯತೆ ನೀಡಲಾಗುವುದು. ಹಾಳಾದ ಸಿಸಿಟಿವಿ ಕ್ಯಾಮೆರಾಗಳ ದುರಸ್ತಿಗೆ ಕ್ರಮ ಕೈಗೊಳ್ಳಲಾಗುವುದು. ಗುಣಮಟ್ಟದ ತನಿಖೆಗೆ ಒತ್ತು ನೀಡಲಾಗುವುದು. ನಾನು ಕಮೀಶ್ನರ್ ಆಗಿ ಅಧಿಕಾರ ವಹಿಸಿಕೊಂಡ ೨ ದಿನಗಳಲ್ಲಿ ಅವಳಿ ನಗರದ ಮಾಹಿತಿ ಪಡೆದುಕೊಳ್ಳುತ್ತಿದ್ದೇನೆ ಎಂದು ತಿಳಿಸಿದರು.
ಗಾಂಜಾ, ಅಫೀಮು ಸೇವನೆಯಿಂದ ಅಪರಾಧ ಕೃತ್ಯಗಳು ಹೆಚ್ಚಾಗುತ್ತಿದ್ದು, ಗಾಂಜಾ, ಅಫೀಮು ಮಾರಾಟ ಹಾಗೂ ಸಾಗಣೆ ಮಾಡುವವರ ಮೇಲೆ ನಿರ್ಧಾಕ್ಷಣ್ಯ ಕ್ರಮ ಕೈಗೊಳ್ಳಲಾಗುವುದು. ಮದ್ಯಪಾನ ಹಾಗೂ ಗಾಂಜಾ ನಶೆಯಲ್ಲಿಯೇ ಚಾಕು ಇರಿತ ಪ್ರಕರಣಗಳು ಹೆಚ್ಚಾಗಿ ನಡೆಯುತ್ತಿರುವುದು ತಿಳಿದಿದೆ. ಗಾಂಜಾ, ಅಫೀಮು ಮಾರಾಟದ ನಿಯಂತ್ರಣಕ್ಕೆ ಕ್ರಮ ಕೈಗೊಳ್ಳಲಾಗುವುದು. ಈ ದಿಸೆಯಲ್ಲಿ ಕಾಲೇಜು ವಿದ್ಯಾರ್ಥಿಗಳಲ್ಲಿ ಜಾಗೃತಿ ಮೂಡಿಸುವುದು ಅವಶ್ಯಕವಾಗಿದೆ. ಜಿಲ್ಲಾಡಳಿತ, ಸ್ವಯಂಸೇವಾ ಸಂಸ್ಥೆಗಳ ಸಹಯೋಗದಲ್ಲಿ ಕಾಲೇಜು ವಿದ್ಯಾರ್ಥಿಗಳಿಗೆ ಜಾಗೃತಿ ಕಾರ್ಯಕ್ರಮಗಳನ್ನು ಆಯೋಜಿಸಲಾಗುವುದು ಎಂದರು.

ಅಪರಾಧ ಪತ್ತೆಗೆ ತಂತ್ರಜ್ಞಾನ ಬಳಕೆಗೆ ಆದ್ಯತೆ

Exit mobile version