Home ನಮ್ಮ ಜಿಲ್ಲೆ ಉತ್ತರ ಕನ್ನಡ ಅಪಾಯಕ್ಕೆ ಸಿಲುಕ್ಕಿದ್ದ ತೆಲುಗು ನಟನನ್ನು ರಕ್ಷಿಸಿದ ಸಿಬ್ಬಂದಿ

ಅಪಾಯಕ್ಕೆ ಸಿಲುಕ್ಕಿದ್ದ ತೆಲುಗು ನಟನನ್ನು ರಕ್ಷಿಸಿದ ಸಿಬ್ಬಂದಿ

0

ಗೋಕರ್ಣ: ಸಮುದ್ರ ಸುಳಿಗೆ ಸಿಲುಕಿ ಜೀವಾಪಾಯದಲ್ಲಿದ್ದ ತೆಲುಗು ನಟನನ್ನು ಗೋಕರ್ಣ ಮಿಸ್ಟಿಕ್ ಅಡ್ವೆಂಚರ್ ಸಿಬ್ಬಂದಿ ಮತ್ತು ಜೀವರಕ್ಷಕ ಸಿಬ್ಬಂದಿ ರಕ್ಷಿಸಿದ ಘಟನೆ ಶುಕ್ರವಾರ ಮಧ್ಯಾಹ್ನ ಕುಡ್ಲೆ ಕಡಲ ತೀರದಲ್ಲಿ ನಡೆದಿದೆ.
ತೆಲುಗು ಚಿತ್ರನಟ ಅಖಿಲರಾಜ(26) ಪ್ರಾಣಾಪಾಯದಿಂದ ಪಾರಾಗಿ ಬಂದವರು. ಕಳೆದ ಹಲವು ದಿನಗಳಿಂದ ಇಲ್ಲಿಗೆ ಪ್ರವಾಸಕ್ಕೆ ಬಂದಿದ್ದು, ಕುಡ್ಲೆ ಬೀಚ್‌ನಲ್ಲಿರುವ ರೆಸಾರ್ಟ್‌ವೊಂದರಲ್ಲಿ ವಾಸ್ತವ್ಯ ಮಾಡಿದ್ದರು. ಶುಕ್ರವಾರ ಮಧ್ಯಾಹ್ನ ಸಮುದ್ರದಲ್ಲಿ ಈಜಾಡಲು ತೆರಳಿದ ವೇಳೆ ಈ ದುರ್ಘಟನೆ ನಡೆದಿದೆ. ತಮ್ಮ ಜೀವದ ಹಂಗು ತೊರೆದು ಪ್ರವಾಸಿಗನ ಜೀವ ಉಳಿಸಿದ ಅಡ್ವೆಂಚರ್ ಸಿಬ್ಬಂದಿ ಮತ್ತು ಜೀವರಕ್ಷಕ ಸಿಬ್ಬಂದಿ ಕಾರ್ಯಕ್ಕೆ ಸಾರ್ವಜನಿಕರು ಪ್ರಶಂಸೆ ವ್ಯಕ್ತಪಡಿಸಿದ್ದಾರೆ.
ಪತ್ರಿಕೆಯೊಂದಿಗೆ ಮಾತನಾಡಿದ ಅಖಿಲರಾಜ್, ಸಕಾಲಕ್ಕೆ ಬಂದು ಜೀವ ಕಾಪಾಡಿದ ಸಿಬ್ಬಂದಿಗೆ ಕೃತಜ್ಞತೆ ಸಲ್ಲಿಸುತ್ತೇನೆ. ಪುಣ್ಯ ಕ್ಷೇತ್ರದಲ್ಲಿರುವ ಎಲ್ಲಾ ಪ್ರಮುಖ ದೇವಾಲಯಗಳಿಗೆ ಭೇಟಿ ನೀಡಿದ್ದೇನೆ. ಸಮುದ್ರದಲ್ಲಿ ಕೆಲಕಾಲ ಕಳೆಯಲು ನೀರಿಗಿಳಿದಿದ್ದ ವೇಳೆ ಆಕಸ್ಮಿಕವಾಗಿ ಅಪಾಯದಲ್ಲಿ ಸಿಲುಕಿದ್ದೆ. ಇಲ್ಲಿಗೆ ಬರುವ ಪ್ರವಾಸಿಗರು ಈ ಬಗ್ಗೆ ಕಾಳಜಿ ವಹಿಸಬೇಕು ಎಂದು ಈ ಮೂಲಕ ಕೇಳಿಕೊಳ್ಳುತ್ತೇನೆ ಎಂದರು.

Exit mobile version