ಅರಭಾವಿಯಲ್ಲಿ ಬಾಲಚಂದ್ರ ಜಾರಕಿಹೊಳಿ ನಾಮಪತ್ರ ಸಲ್ಲಿಕೆ

0
9

ಬೆಳಗಾವಿ(ಮೂಡಲಗಿ): ಅರಭಾವಿ ಕ್ಷೇತ್ರದ ಬಿಜೆಪಿ ಅಭ್ಯರ್ಥಿಯಾಗಿ ಶಾಸಕ ಬಾಲಚಂದ್ರ ಜಾರಕಿಹೊಳಿ ಇಂದು ನಾಮಪತ್ರ ಸಲ್ಲಿಸಿದರು.
ನಾಲ್ವರು ಸೂಚಕರೊಂದಿಗೆ ಮುಂಜಾನೆ ತಹಶೀಲ್ದಾರ್ ಕಚೇರಿಯಲ್ಲಿ ಚುನಾವಣಾಧಿಕಾರಿಯಾಗಿರುವ ಉಪವಿಭಾಗಾಧಿಕಾರಿ ಪ್ರಭಾವತಿ ಫಕೀರಪೂರ ಅವರಿಗೆ ಬಿಜೆಪಿ ಅಧಿಕೃತ ಅಭ್ಯರ್ಥಿಯಾಗಿ ಉಮೇದುವಾರಿಕೆ ಸಲ್ಲಿಸಿದರು. ಈ ಸಂದರ್ಭದಲ್ಲಿ ಪ್ರಭಾಶುಗರ ನಿರ್ದೇಶಕರಾದ ಬಸಗೌಡ ಪಾಟೀಲ, ಕೆಂಚನಗೌಡ ಪಾಟೀಲ, ಜಿಪಂ ಮಾಜಿ ಸದಸ್ಯರಾದ ಡಾ. ರಾಜೇಂದ್ರ ಸಣ್ಣಕ್ಕಿ, ಶಂಕರ ಬಿಲಕುಂದಿ ಇತರರಿದ್ದರು.

Previous articleಕರ್ನಾಟಕ ಆಪ್ ವಶವಾಗುವುದು ನಿಶ್ಚಿತ
Next articleಬಾಲಚಂದ್ರ ಜಾರಕಿಹೊಳಿ 35.69 ಕೋಟಿ ರೂ. ಆಸ್ತಿ ಒಡೆಯ