Home Advertisement
Home ನಮ್ಮ ಜಿಲ್ಲೆ ಅಲ್ಲಮಪ್ರಭು ಜನ್ಮ ಸ್ಥಳದ ಅಭಿವೃದ್ಧಿಗೆ 5 ಕೋಟಿ ರೂ. ಬಿಡುಗಡೆ: ಸಿಎಂ

ಅಲ್ಲಮಪ್ರಭು ಜನ್ಮ ಸ್ಥಳದ ಅಭಿವೃದ್ಧಿಗೆ 5 ಕೋಟಿ ರೂ. ಬಿಡುಗಡೆ: ಸಿಎಂ

0
124
ಅಕ್ಕಮ್ಮ

ಶಿವಮೊಗ್ಗ: ಅಲ್ಲಮಪ್ರಭು ಜನ್ಮ ಸ್ಥಳದ ಅಭಿವೃದ್ಧಿಗೆ 5 ಕೋಟಿ ರೂ.ಗಳನ್ನು ಬಿಡುಗಡೆ ಮಾಡಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ತಿಳಿಸಿದರು. ಉಡುತಡಿಯಲ್ಲಿ “ಶಿವಶರಣೆ ಅಕ್ಕಮಹಾದೇವಿಯ 51 ಅಡಿ ಎತ್ತರದ ಪುತ್ಥಳಿ ಅನಾವರಣ, ಅಕ್ಷರಧಾಮ ಮಾದರಿಯ ಯಾತ್ರಾ ಸ್ಥಳದ ಉದ್ಘಾಟನೆ ಹಾಗೂ ಶಿಕಾರಿಪುರ ವಿಧಾನಸಭಾ ಕ್ಷೇತ್ರದ ವಿವಿಧ ಅಭಿವೃದ್ಧಿ ಕಾಮಗಾರಿಗಳ ಉದ್ಘಾಟನೆ ಹಾಗೂ ಶಂಕುಸ್ಥಾಪನಾ ಕಾರ್ಯವನ್ನು ನೇರವೇರಿಸಿ ಮಾತನಾಡಿದ ಅವರು, ಮಹಿಳಾ ವಿಶ್ವವಿದ್ಯಾಲಯದ ಸ್ನಾತಕೋತ್ತರ ಕಟ್ಟಡಕ್ಕೆ 10 ಕೋಟಿ ರೂ.ಗಳ ಅನುದಾನ ಬಿಡುಗಡೆ ಮಾಡುವುದಾಗಿ ಭರವಸೆ ನೀಡಿದರಲ್ಲದೇ ಶಿವನಪಾದವನ್ನು 10 ಕೋಟಿ ರೂ.ಗಳ ವೆಚ್ಚದಲ್ಲಿ ಸಂಪೂರ್ಣವಾಗಿ ಅಭಿವೃದ್ಧಿ ಮಾಡಲಾಗುವುದು ಎಂದರು.


ಇಂದು ಜನರಿಗೆ ಅಗತ್ಯವಿರುವ ಕೆಲಸಗಳು ಆಗಿವೆ. ಶಿಕಾರಿಪುರ ದೇವರ ನಾಡು. ಇದನ್ನು ಕೃಷಿ, ಶಿಕ್ಷಣ ಮತ್ತು ಆಧ್ಯಾತ್ಮಿಕ ವಲಯದಲ್ಲಿ ಮಾದರಿ ತಾಲ್ಲೂಕು ಆಗಿಸಬೇಕು ಎಂಬ ಚಿಂತನೆಯಿಂದ ಈ ಎಲ್ಲಾ ಕೆಲಸಗಳನ್ನು ಮಾಡಲಾಗುವುದು ಎಂದರು.