ಆರೋಗ್ಯ ಸೌಲಭ್ಯ ಸರ್ವರಿಗೂ ತಲುಪಿಸಿ

0
17

ಬೆಳಗಾವಿ: ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಸಚಿವ ದಿನೇಶ್ ಗುಂಡೂರಾವ್ ಅವರ ಅಧ್ಯಕ್ಷತೆಯಲ್ಲಿ ಇಲಾಖೆಯ ಬೆಳಗಾವಿ ವಿಭಾಗ ಮಟ್ಟದ ಪ್ರಗತಿ ಪರಿಶೀಲನಾ ಸಭೆ ಬುಧವಾರ ನಡೆಯಿತು.
ವಿಭಾಗ ವ್ಯಾಪ್ತಿಯ ಜಿಲ್ಲೆಗಳಾದ ಬೆಳಗಾವಿ, ಧಾರವಾಡ, ಹಾವೇರಿ, ಗದಗ, ವಿಜಯಪುರ, ಬಾಗಲಕೋಟೆ, ಉತ್ತರ ಕನ್ನಡ ಜಿಲ್ಲೆಗಳ ರಾಷ್ಟ್ರೀಯ ಆರೋಗ್ಯ ಕಾರ್ಯಕ್ರಮಗಳ ಪ್ರಗತಿ ಪರಿಶೀಲಿಸಲಾಯಿತು. ಶಾಸಕರಾದ ಆಸೀಫ್ ಸೇಠ್, ಮಹಾಂತೇಶ್ ಕೌಜಲಗಿ, ವಿಶ್ವಾಸ್ ವೈದ್ಯ, ಗಣೇಶ್ ಹುಕ್ಕೇರಿ ಸಭೆಯಲ್ಲಿ ಭಾಗವಹಿಸಿದ್ದರು.
ಎಲ್ಲ ಜಿಲ್ಲೆಗಳ ರಾಷ್ಟ್ರೀಯ ಆರೋಗ್ಯ ಕಾರ್ಯಕ್ರಮಗಳನ್ನು ಪರಿಶೀಲನೆ ಮಾಡಿ ಮಾತನಾಡಿದ ಸಚಿವ ದಿನೇಶ್ ಗುಂಡೂರಾವ್, ಕುಂಠಿತ ಪ್ರಗತಿ ಹೊಂದಿದ ಕಾರ್ಯಕ್ರಮಗಳನ್ನು ಚುರುಕುಗೊಳಿಸಿ ಸಮುದಾಯಕ್ಕೆ ಉತ್ತಮ ಆರೋಗ್ಯ ನೀಡಲು ಸೂಚನೆ ನೀಡಿದರು.
ಬೆಳಗಾವಿ ವಿಭಾಗದ ಜಿಲ್ಲೆಗಳಿಂದ ಜಿಲ್ಲಾಧಿಕಾರಿಗಳು, ಜಿಲ್ಲಾ ಪಂಚಾಯತ್ ಮುಖ್ಯ ಅಧಿಕಾರಿಗಳು, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಅಧಿಕಾರಿಗಳು ಭಾಗವಹಿಸಿದ್ದರು. ಬೆಳಗಾವಿ ವಿಭಾಗದ ಸಹ ನಿರ್ದೇಶಕ ಮೂಲಿಮನಿ ಸ್ವಾಗತಿಸಿದರು. ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ.ಮಹೇಶ್ ಕೋಣಿ ಮತ್ತಿತರರು ಉಪಸ್ಥಿತರಿದ್ದರು.

Previous articleಮಕ್ಕಳ ರಕ್ಷಣೆ ನಮ್ಮೆಲ್ಲರ ಕರ್ತವ್ಯ
Next articleತಾಯಿಗೆ ನಾಯಿಮರಿ ಉಡುಗೊರೆ ನೀಡಿದ ರಾಹುಲ್