ಇಂದು ಬೆಂಗಳೂರಿಗೆ ಉಪರಾಷ್ಟ್ರಪತಿ ಭೇಟಿ: ಸಾರ್ವಜನಿಕರಿಗೆ ಸಂಚಾರ ಮಾರ್ಗ ಸೂಚಿ

0
9
ಉಪರಾಷ್ಟ್ರಪತಿ

ಉಪರಾಷ್ಟ್ರಪತಿ ಜಗದೀಪ್ ಧನ್‌ಕರ್ ಇಂದು ಬೆಂಗಳೂರಿಗೆ ಭೇಟಿ ನೀಡುತ್ತಿರುವ ಹಿನ್ನೆಲೆಯಲ್ಲಿ ವಾಹನಗಳು ಸುಗಮ ಸಂಚಾರಕ್ಕೆ ಅನುವು ಮಾಡಿಕೊಡಲು ಸಾರ್ವಜನಿಕರು ಬದಲಿ ಮಾರ್ಗಗಳನ್ನು ಬಳಸುವಂತೆ ನಗರ ಸಂಚಾರ ಪೊಲೀಸರು ಮನವಿ ಮಾಡಿದ್ದಾರೆ. ಬೆಂಗಳೂರಿನ ನ್ಯೂಬಿಇಎಲ್ ರಸ್ತೆಯ ಎಂ.ಎಸ್.ರಾಮಯ್ಯ ನಗರದ ಕಾಲೇಜಿನ ಜ್ಞಾನಗಂಗೋತ್ರಿ ಆವರಣದಲ್ಲಿ ನಾಳೆ ಬೆಳಗ್ಗೆ ದಿವಂಗತ ಡಾ.ಎಂ.ಎಸ್.ರಾಮಯ್ಯ ಅವರ ಜನ್ಮ ಶತಮಾನೋತ್ಸವ ಕಾರ್ಯಕ್ರಮದಲ್ಲಿ ಉಪರಾಷ್ಟ್ರಪತಿ ಜಗದೀಪ್ ಧನ್‌ಕರ್, ರಾಜ್ಯಪಾಲ ಥಾವರ್‌ಚಂದ್ ಗೆಹ್ಲೋಟ್, ಮುಖ್ಯಮಂತ್ರಿಬಸವರಾಜ ಬೊಮ್ಮಾಯಿ, ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಪಾಲ್ಗೊಳ್ಳಲಿದ್ದಾರೆ. ಇಂದು ಸಂಜೆ 4 ರಿಂದ 6ರವರೆಗೆ ಕೆಲ ರಸ್ತೆಗಳಲ್ಲಿ ಸಂಚಾರ ದಟ್ಟಣೆ ಹೆಚ್ಚಾಗುವ ಸಾಧ್ಯತೆಯಿದ್ದು, ಸಾರ್ವಜನಿಕರು ಸಹಕರಿಸುವಂತೆ ಮನವಿ ಮಾಡಲಾಗಿದೆ.ನಗರದ ಓಲ್ಡ್ ಏರ್​ಪೋರ್ಟ್ ರಸ್ತೆ, ಇನ್​ಫ್ಯಾಂಟ್ರಿ ರಸ್ತೆ, ರಾಜಭವನ ರಸ್ತೆ, ಕಬ್ಬನ್ ರಸ್ತೆ, ಕ್ವೀನ್ಸ್ ರಸ್ತೆ ಹಾಗೂ ಎಂ.ಜಿ. ರಸ್ತೆಗಳಲ್ಲಿ ಇಂದು ಸಂಜೆ 4 ರಿಂದ 6ರವರೆಗೆ ಸಂಚಾರ ದಟ್ಟಣೆ ಏರ್ಪಡುವ ಸಾಧ್ಯತೆ ಇರುವುದರಿಂದ ಈ ರಸ್ತೆಗಳನ್ನು ಬಳಸದೇ ಬೇರೆ ಮಾರ್ಗದಲ್ಲಿ ಸಂಚರಿಸಲು ಸೂಚಿಸಲಾಗಿದೆ. ನಗರದ ಹಲವು ರಸ್ತೆಗಳಲ್ಲಿ ಸಂಚಾರ ನಿರ್ಬಂಧ ವಿಧಿಸಿ ಬೆಂಗಳೂರು ಸಂಚಾರಿ ಪೊಲೀಸರು ಪ್ರಕಟಣೆ ಹೊರಡಿಸಿದ್ದಾರೆ‌.

Previous articleನೀರಿಗಾಗಿ ಕಾಂಗ್ರೆಸ್ ಬಿಜೆಪಿ ಮಧ್ಯೆ ಜಟಾಪಟಿ
Next articleಬಸ್ಸಿನ ಎಕ್ಸೆಲ್ ಕಟ್ : 18 ಜನರಿಗೆ ಗಾಯ