Home Advertisement
Home ನಮ್ಮ ಜಿಲ್ಲೆ ದಕ್ಷಿಣ ಕನ್ನಡ ಇಸ್ರೇಲ್ – ಕರಾವಳಿಗರು ಭಯ ಪಡುವ ಅಗತ್ಯವಿಲ್ಲ

ಇಸ್ರೇಲ್ – ಕರಾವಳಿಗರು ಭಯ ಪಡುವ ಅಗತ್ಯವಿಲ್ಲ

0
101
ಕಟೀಲ್

ಮಂಗಳೂರು: ಇಸ್ರೇಲ್‌ನಲ್ಲಿರುವ ಕರಾವಳಿಯ ಜನರನ್ನು ಸುರಕ್ಷಿತವಾಗಿ ಕರೆತರುವ ಕೆಲಸವನ್ನು ಕೇಂದ್ರ ಸರಕಾರ ಮಾಡುತ್ತದೆ ಯಾರೂ ಭಯ ಪಡುವ ಅಗತ್ಯವಿಲ್ಲ ಎಂದು ದಕ್ಷಿಣ ಕನ್ನಡ ಸಂಸದ ನಳಿನ್ ಕುಮಾರ್ ಕಟೀಲ್ ತಿಳಿಸಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಇಸ್ರೇಲ್‌ನಲ್ಲಿ ಐದು ಸಾವಿರ ದ.ಕ ಜಿಲ್ಲೆಯ ಜನರು ಇದ್ದಾರೆಂಬ ಮಾಹಿತಿ ಇದೆ. ಈಗಾಗಲೇ ವಿದೇಶಾಂಗ ಇಲಾಖೆ ಸಚಿವರಿಗೆ ಪತ್ರ ಬರೆದಿದ್ದೇನೆ.ಯಾರಿಗೂ ಅಪಾಯ ಆಗದಂತೆ ಅವರಿಗೆ ರಕ್ಷಣೆ ಒದಗಿಸುತ್ತೇವೆ. ಅವರನ್ನು ಸುರಕ್ಷಿತವಾಗಿ ಕರೆ ತರುವ ಕೆಲಸ ನಮ್ಮ ಸರ್ಕಾರ ಮಾಡಲಿದೆ. ಸಚಿವ ಮುರಳೀಧರನ್ ಅವರ ಜೊತೆಗೂ ನಾನು ಮಾತನಾಡಿದ್ದೇನೆ. ದ.ಕ ಜಿಲ್ಲೆಯ ಪ್ರಭಾರ ಜಿಲ್ಲಾಧಿಕಾರಿಗಳಿಗೆ ಜಿಲ್ಲೆಯ ಇಸ್ರೇಲ್ ವಾಸಿಗಳ ಪೂರ್ಣ ಮಾಹಿತಿ ತರಿಸಿ ಕೊಳ್ಳಲು ಸೂಚಿಸುತ್ತೇನೆ ಎಂದರು.
ಯುದ್ಧದ ಪರಿಸ್ಥಿತಿ ಇದ್ದಾಗ ಅವರ ಮನೆಯವರಿಗೆ ಭಯದ ವಾತಾವರಣ ಇರುತ್ತವೆ. ಈಗಲೂ ಇಸ್ರೇಲ್ ನಲ್ಲಿದ್ದವರು ಸುರಕ್ಷಿತವಾಗಿ ಇದ್ದರೂ ಭಯದ ವಾತಾವರಣ ಇದೆ. ರಷ್ಯಾ-ಉಕ್ರೇನ್ ಯುದ್ದ ಆದಾಗಲೂ ಇಂಥದ್ದೇ ಪರಿಸ್ಥಿತಿ ಇತ್ತು. ಆಗಲೂ ಅವರ ಮನೆಗಳಿಗೆ ತೆರಳಿ ಸಮಾಧಾನ ಹೇಳಿದ್ದೆವು. ಈಗಲೂ ನಾನು ರಾಯಭಾರ ಕಚೇರಿ ಜೊತೆಗೆ ಸಂಪರ್ಕದಲ್ಲಿ ಇದ್ದೇನೆ. ಯಾರೂ ಭಯ ಪಡುವ ಅಗತ್ಯ ಇಲ್ಲ. ಏನೇ ಆತಂಕ ಇದ್ದರೂ ನನ್ನನ್ನ ನೇರವಾಗಿ ಸಂಪರ್ಕಿಸಿ ಎಂದಿದ್ದಾರೆ.