ಉಚಿತ ವಿದ್ಯುತ್: 8 ಲಕ್ಷ ನೋಂದಣಿ

0
14

ಬೆಂಗಳೂರು: ೨೦೦ ಯೂನಿಟ್ ಉಚಿತ ವಿದ್ಯುತ್ ಪಡೆಯುವ ಗೃಹ ಜ್ಯೋತಿ ಯೋಜನೆಗೆ ನೋಂದಣಿ ಪ್ರಕ್ರಿಯೆ ಮೂರನೇ ದಿನಕ್ಕೆ ಕಾಲಿಟ್ಟಿದ್ದು, ಬೆಸ್ಕಾಂನಲ್ಲಿ ಇದುವರೆಗೆ ೮,೧೬,೬೩೧ ಗ್ರಾಹಕರು ಯೋಜನೆಗೆ ತಮ್ಮ ಹೆಸರನ್ನು ನೋಂದಾಯಿಸಿದ್ದಾರೆ ಎಂದು ಬೆಸ್ಕಾಂ ಮಾಹಿತಿ ನೀಡಿದೆ.
ಬೆಂಗಳೂರು ಒನ್, ಕರ್ನಾಟಕ ಒನ್ ಮತ್ತು ಗ್ರಾಮ ಒನ್ ಕೇಂದ್ರಗಳಲ್ಲಿ ನೋಂದಣಿ ಪ್ರಕ್ರಿಯೆ ಸುಗಮವಾಗಿ ನಡೆದಿದೆ ಎಂದು ಬೆಸ್ಕಾಂ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.
ಯೋಜನೆಯ ನೋಂದಣಿ ಪ್ರಕ್ರಿಯೆಯು ತುಂಬಾ ಸರಳವಾಗಿದೆ ಮತ್ತು ಗ್ರಾಹಕರು ಯಾವುದೇ ದಾಖಲೆಗಳನ್ನು ಒದಗಿಸುವ ಅಗತ್ಯವಿಲ್ಲ. ನೋಂದಣಿ ಮಾಡಲು ವಿದ್ಯುತ್ ಬಿಲ್‌ನಲ್ಲಿ ಖಾತೆ ಸಂಖ್ಯೆ, ಗ್ರಾಹಕರ ಆಧಾರ್ ಸಂಖ್ಯೆ ಮತ್ತು ಮೊಬೈಲ್ ಸಂಖ್ಯೆಯನ್ನು ನಮೂದಿಸಿದರೆ ಸಾಕು.
ನೋಂದಣಿ ಪ್ರಕ್ರಿಯೆ ರಾಜ್ಯದ ಎಲ್ಲ ಕರ್ನಾಟಕ ಒನ್, ಗ್ರಾಮ ಒನ್ ಹಾಗು ಬೆಂಗಳೂರು ಒನ್ ಕೇಂದ್ರಗಳಲ್ಲಿ ನಡೆಯುತ್ತಿದೆ. ಸೇವಾ ಸಿಂಧು ಪೋರ್ಟಲ್ https://sevasindhugs.karnataka.gov.in ಮೂಲಕ ನೋಂದಣಿ ಮಾಡಲಾಗುತ್ತಿದೆ.
ನೋಂದಣಿ ಪ್ರಕ್ರಿಯೆಗೆ ಯಾವುದೇ ಗಡುವು ಇಲ್ಲ. ಹಾಗಾಗಿ ಗ್ರಾಹಕರು ಆತಂಕ ಪಡುವ ಅಗತ್ಯವಿಲ್ಲ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

Previous articleಮಗುಚಿ ಬಿದ್ದ ಕ್ರೇನ್: ಸ್ವಲ್ಪದರಲ್ಲಿಯೇ ತಪ್ಪಿದ ಅನಾಹುತ
Next articleಕೋಟೆನಗರಿಯಲ್ಲಿ ಗಮನಸೆಳೆದ ಯೋಗ ಪ್ರದರ್ಶನ