ಬೆಂಗಳೂರು: ಏಷ್ಯನ್ ಗೇಮ್ಸ್‌ನ ಮಹಿಳಾ ವಿಭಾಗದ ಗಾಲ್ಫ್‌ನಲ್ಲಿ ಬೆಳ್ಳಿ ಪದಕ ಜಯಿಸಿರುವ ಕನ್ನಡತಿ ಅದಿತಿ ಅಶೋಕ್ ಅವರಿಗೆ ಅಭಿನಂದನೆಗಳು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ಈ ಕುರಿತು ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಮಾಡಿರುವ ಅವರು ಗಾಲ್ಫ್ ನಲ್ಲಿ ಪದಕ ಜಯಿಸಿದ ಮೊಟ್ಟ ಮೊದಲ ಭಾರತೀಯ ಮಹಿಳಾ ಕ್ರೀಡಾಪಟುವಾಗಿ ಹೊರಹೊಮ್ಮಿರುವ ತಮ್ಮ ಸಾಧನೆ ನಾಡಿನ ಪ್ರತಿಯೊಬ್ಬರು ಹೆಮ್ಮೆ ಪಡುವಂತೆ ಮಾಡಿದೆ. ತಮ್ಮ ಕ್ರೀಡಾ ಬದುಕು ಮತ್ತಷ್ಟು ಉಜ್ವಲವಾಗಲಿ, ಇಂತಹ ಇನ್ನಷ್ಟು ಸಾಧನೆಗಳು ತಮ್ಮಿಂದ ಮೂಡಿಬರಲಿ ಎಂದು ಹಾರೈಸುತ್ತೇನೆ ಎಂದಿದ್ದಾರೆ.