ಬೆಂಗಳೂರು: ಯಾರೋ ಒಬ್ಬರ ಮಾತು ಕೇಳಿ ನಮ್ಮ ಪಕ್ಷದಲ್ಲಿ ಟಿಕೆಟ್ ಕೊಡುವುದಿಲ್ಲ. ಕೇಂದ್ರದ ವರಿಷ್ಠರು ಎಲ್ಲರೂ ಕೂತು ಚರ್ಚೆ ಮಾಡಿ ಟಿಕೆಟ್ ಕೊಟ್ಟಿದ್ದಾರೆ. ಎಲ್ಲರ ಒಮ್ಮತದ ತೀರ್ಮಾನದಿಂದ ಅಭ್ಯರ್ಥಿ ಘೋಷಣೆ ಆಗಿದೆ ಎಂದು ಹೇಳುವ ಮೂಲಕ ಯಡಿಯೂರಪ್ಪ ಅವರು ಕಾಂತೇಶ್ಗೆ ಟಿಕೆಟ್ ತಪ್ಪಿಸಿದ್ದಾರೆ ಎನ್ನುವ ಈಶ್ವರಪ್ಪ ಆರೋಪಕ್ಕೆ ಬಿ.ವೈ. ವಿಜಯೇಂದ್ರ ತಿರುಗೇಟು ನೀಡಿದ್ದಾರೆ.
ಬೆಂಗಳೂರಿನಲ್ಲಿ ಮಾತನಾಡಿದ ಅವರು, ಎಲ್ಲದಕ್ಕೂ ಕ್ಷೇತ್ರದ ಜನರು, ರಾಜ್ಯದ ಜನ ಉತ್ತರ ಕೊಡುತ್ತಾರೆ. ನಾನು ಹೆಚ್ಚಿಗೆ ಮಾತಾಡಲು ಇಷ್ಟ ಪಡಲ್ಲ. ಈಶ್ವರಪ್ಪ ನಮ್ಮ ಪಕ್ಷದ ಹಿರಿಯರು. ಅವರ ಜೊತೆ ಮಾತಾಡುತ್ತೇವೆ. ಅವರು ನೋವಿನಲ್ಲಿ ಇದ್ದಾರೆ, ಎಲ್ಲವೂ ಸುಸೂತ್ರವಾಗಿ ಬಗೆಹರಿಯಲಿದೆ ಎಂದರು.